
ಮಾಗಡಿ: ಕುರುಕಲು ತಿಂಡಿ ಹಾಗೂ ಪೊಟ್ಟಣಗಳಲ್ಲಿ ಆಕರ್ಷಕವಾಗಿ ಪ್ಯಾಕ್ ಮಾಡಿ ಮಾರುವ ಆಹಾರ ಪದಾರ್ಥಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನಿಸರ್ಗ ಪರಿಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್.ಶಿವಲಿಂಗಯ್ಯ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಿಸರ್ಗ ಪರಿಚರಣ ಟ್ರಸ್ಟ್, ರೋಟರಿ ಕ್ಲಬ್ ಮತ್ತು ಚಿಗುರು ಬಾಲ ವಿಕಾಸ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದರು.
ವಿಜ್ಞಾನ ಜಗತ್ತಿನಲ್ಲಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಎರಡರಲ್ಲೂ ನೋಬೆಲ್ ಪ್ರಶಸ್ತಿ ಪಡೆದ ಮೇಡಂ ಕ್ಯೂರಿ ಅವರ ಜನ್ಮದಿನದ ಸ್ಮರಣೆ ಅಂಗವಾಗಿ ನವೆಂಬರ್ 7ರಂದು ಕ್ಯಾನ್ಸರ್ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಮಕ್ಕಳು ಹಾಗೂ ಪೋಷಕರು ಸಿದ್ಧಪಡಿಸಿದ ಮತ್ತು ಪೊಟ್ಟಣಗಳಲ್ಲಿ ಆಕರ್ಷಕವಾಗಿ ಪ್ಯಾಕ್ ಮಾಡಿ ಮಾರುವ ತಿಂಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಅಂತಹ ಆಹಾರ ಪದಾರ್ಥಗಳಿಂದ ಉಂಟಾಗುವ ಅಪಾಯಗಳ ಬಗ್ಗೆ ವಿವರಿಸಿದರು. ಪ್ಲಾಸ್ಟಿಕ್ ಬಾಟಲುಗಳಲ್ಲಿ ಸಿಗುವ ನೀರಿನ ಬಳಕೆ ಕಡಿಮೆ ಮಾಡುವ ಮೂಲಕ ಶರೀರಕ್ಕೆ ಸೇರುವ ಮೈಕ್ರೋಪ್ಲಾಸ್ಟಿಕ್ ಅಪಾಯದ ಬಗ್ಗೆ ತಿಳಿಸಿದರು.
ಚಿಗುರು ಬಾಲ ವಿಕಾಸ ಸಂಸ್ಥೆ ಅಧ್ಯಕ್ಷೆ ಕಲ್ಪನಾ ಶಿವಣ್ಣ ಮಾತನಾಡಿ, ವಿದ್ಯಾರ್ಥಿನಿಯರಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಚಂದ್ರಪ್ಪ, ಹಿರಿಯ ಸಾಹಿತಿಗಳಾದ ರಾಮಚಂದ್ರಯ್ಯ , ರೋಟರಿ ಮಾಗಡಿ ಸೆಂಟ್ರಲ್ ಅಧ್ಯಕ್ಷ ಡಾ. ಬಿ. ಕೆ. ಮಂಜುನಾಥ್, ದೈಹಿಕ ಶಿಕ್ಷಕ ಗೌರೀಶ್, ನಾಗರಾಜು, ಗಣೇಶ್, ಬೆಟಗೇರಿ, ಪತ್ರಕರ್ತ ಟಿ.ಎಂ.ಶ್ರೀನಿವಾಸ್, ಶಾಲೆಯ ಮುಖ್ಯೋಪಾಧ್ಯಾಯಿನಿ ಪದ್ಮ ಹಾಗೂ ಎಲ್ಲಾ ಉಪಾಧ್ಯಾಯರುಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.