ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ
ಚನ್ನಪಟ್ಟಣ: ಸರ್ಕಾರಿ ಜಾಗದ ಒತ್ತುವರಿ ತಡೆಯಲು ವಿಫಲ ಮತ್ತು ಸರ್ಕಾರಿ ಜಾಗದಲ್ಲಿದ್ದ ಹಳ್ಳ ಮುಚ್ಚಿರುವವರ ವಿರುದ್ಧ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿ ಜಿಲ್ಲಾಧಿಕಾರಿ ಸೇರಿ 8 ಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ, ಉಪ ವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರ್ ಮಹೇಂದ್ರ, ತಾ.ಪಂ. ಇ.ಒ. ಶಿವಕುಮಾರ್, ಭೂಮಾಪಕ ಪುಟ್ಟರಾಜು, ಉಪ ತಹಶೀಲ್ದಾರ್ ಸುನೀಲ್, ರೆವಿನ್ಯೂ ಇನ್‌ಸ್ಪೆಕ್ಟರ್ ವೀರೇಶ್, ಗ್ರಾಮ ಲೆಕ್ಕಾಧಿಕಾರಿ ವಿನೋದ್, ಗ್ರಾ.ಪಂ. ಪಿಡಿಒ ಬಸವರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ಲೋಕಾಯುಕ್ತದಲ್ಲಿ ದೂರು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.