ADVERTISEMENT

ಸಿಇಟಿ: ರಾಮನಗರ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 5:10 IST
Last Updated 21 ಸೆಪ್ಟೆಂಬರ್ 2021, 5:10 IST

ರಾಮನಗರ: ಸಾಮಾನ್ಯ ಅರ್ಹತಾ ಪರೀಕ್ಷೆ ( ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜಿಲ್ಲೆಯ ವಿದ್ಯಾರ್ಥಿಗಳು ವಿವಿಧ ರ್‍ಯಾಂಕ್‌ ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ 2,571 ಮಂದಿ ಪರೀಕ್ಷೆಗೆ ನೋಂದಾಯಿಸಿದ್ದು, ಇವರಲ್ಲಿ 2,481 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ನ್ಯಾಚುರೋಪಥಿ ಮತ್ತು ಯೋಗದಲ್ಲಿ 2,246 ಮಂದಿ, ಎಂಜಿನಿಯರಿಂಗ್ ವಿಭಾಗದಲ್ಲಿ 2,401 ವಿದ್ಯಾರ್ಥಿಗಳು ರ್‍ಯಾಂಕಿಂಗ್‌ ಪಡೆದಿದ್ದಾರೆ. ಬಿ.ಎಸ್ಸಿ ತೋಟಗಾರಿಕೆಯಲ್ಲಿ 2,222, ಬಿ.ವಿ.ಎಸ್ಸಿಯಲ್ಲಿ 2,246, ಬಿ.ಫಾರ್ಮಾದಲ್ಲಿ 2,425 ಮತ್ತು ಡಿ ಫಾರ್ಮಾದಲ್ಲಿ 2,425 ವಿದ್ಯಾರ್ಥಿಗಳಿಗೆ ರ್‍ಯಾಂಕಿಂಗ್‌ ದೊರೆತಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗೋವಿಂದರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT