
ಮಾಗಡಿ: ತಾಲ್ಲೂಕಿನ ಚಕ್ರಬಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಐದು ವರ್ಷದ ಆಡಳಿತ ಮಂಡಳಿ ಸದಸ್ಯರ ಚುನಾವಣೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆಯಲಿದೆ.
40 ವರ್ಷದ ನಂತರ 11 ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಶಾಸಕ ಬಾಲಕೃಷ್ಣಸಹೋದರ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ ಮಾಡಿರುವುದರಿಂದ ಈ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸಿದೆ.
ಸಾಲಗಾರರಲ್ಲದ ಕ್ಷೇತ್ರಕ್ಕೆ ಒಂದು ಮತ ಚಲಾಯಿಸಬೇಕಿದ್ದು ಹಾಗೂ ಸಾಲಗಾರರ ಕ್ಷೇತ್ರಕ್ಕೆ ಹತ್ತು ಮತ ಚಲಾಯಿಸಬೇಕಿದೆ. ಶಾಸಕ ಬಾಲಕೃಷ್ಣ ಸೇರಿ ಅವರ ಕುಟುಂಬ ವರ್ಗದವರು ಮತದಾನದ ಹಕ್ಕು ಪಡೆದಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಹಾಗೂ ಜೆಡಿಎಸ್ ಬೆಂಬಲಿತ ನಿರ್ದೇಶಕರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಚುನಾವಣೆ ಜಿದ್ದಾಜಿದ್ದಿಯಿಂದ ಕೂಡಿದ್ದು, ಅಭ್ಯರ್ಥಿಗಳು ಪ್ರತಿ ಮತದಾರರ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.
ಭಾನುವಾರ ಸಂಜೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.