ಚನ್ನಪಟ್ಟಣ: ನಗರದ ಕಲ್ಪಶ್ರೀ ಪರ್ ಫಾರ್ಮಿಂಗ್ ಆರ್ಟ್ಸ್ ಸೆಂಟರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಈಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಚನ್ನಪಟ್ಟಣ, ಬೆಂಗಳೂರು, ಮೈಸೂರು, ಮಂಡ್ಯ, ಹೊಸಕೋಟೆ, ತುಮಕೂರು, ಹೈದರಾಬಾದ್, ಚೆನ್ನೈ, ಮುಂಬೈ, ಪುಣೆ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಭರತನಾಟ್ಯ, ಕುಚಿಪುಡಿ, ಕಥಕ್, ಸಮಕಾಲೀನ ನೃತ್ಯ ಪ್ರದರ್ಶನ ನೀಡಿದರು. ಸೆಂಟರ್ ಕಾರ್ಯದರ್ಶಿ ಎಂ.ಸಿ. ಸುಜೇಂದ್ರಬಾಬು ಅವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.