
ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದೇಸಿ ಕಲೆ ಹಾಗೂ ಸಂಸ್ಕೃತಿ ಪ್ರತಿಬಿಂಬಿಸುವ ವರ್ಣರಂಜಿತ ವಾರ್ಷಿಕೋತ್ಸವ ಸಮಾರಂಭ ಶುಕ್ರವಾರ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳು ಹಳ್ಳಿ ಸೊಗಡು ತುಂಬಿದ ಕಲಾತ್ಮಕವಾದ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪೋಷಕರು ಹಾಗೂ ಸಾರ್ವಜನಿಕರ ಗಮನ ಸೆಳೆದರು. ಮಕ್ಕಳು ಅಭಿನಯಿಸಿದ ಯಕ್ಷಗಾನ ಪ್ರಸಂಗ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಲಿಂಗಯ್ಯ ಮಾತನಾಡಿ, ಮಕ್ಕಳು ಶಿಕ್ಷಣದ ಜತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿ ಅಡಗಿರುವ ಸೂಕ್ತ ಪ್ರತಿಭೆ ಹೊರಹಾಕುತ್ತಿರುವುದು ಭವಿಷ್ಯ ದೃಷ್ಟಿಯಿಂದ ಸ್ವಾಗತಾರ್ಹ ಕೆಲಸ ಎಂದರು.
ಎಸ್‌ಡಿಎಂಸಿ ಉಪಾಧ್ಯಕ್ಷ ಕಾಳೇಗೌಡ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ಸಿಕ್ಕರೆ ಎಲ್ಲ ವಿಷಯಗಳಲ್ಲೂ ಉತ್ತಮ ಸ್ಥಾನ ತಲುಪುತ್ತಾರೆ ಎಂಬುದಕ್ಕೆ ಈ ಕಾರ್ಯಕ್ರಮವೇ ಸಾಕ್ಷಿ ಎಂದರು.
ರಾಜ್ಯ ರೈತ ಸಂಘದ ಉಪಾಧ್ಯಕ್ಷೆ ಅನಸೂಯಮ್ಮ, ಬಿ.ವಿ.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೊಡ್ಡಮ್ಮ ಸಿದ್ದಯ್ಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಭಾಗ್ಯಮ್ಮ ಜಗದೀಶ್, ಸದಸ್ಯರಾದ ದೇವರಾಜು, ರಂಗಸ್ವಾಮಿ, ಮುಖಂಡರಾದ ಡಿ.ಕೆ.ಕಾಂತರಾಜು, ಅರ್ಜುನ್, ಶಿವಣ್ಣಗೌಡ, ಗಿರೀಶ್ ಬಾಬು, ಮಲ್ಲೇಶ್ ದ್ಯಾವಪಟ್ಟಣ, ಯದುನಂದನ್, ಡಿ.ಕೆ.ಪ್ರಕಾಶ್, ರವೀಶ್, ಶಾಲೆ ಪ್ರಾಂಶುಪಾಲ ಚಿಕ್ಕಣ್ಣಯ್ಯ, ಶಿಕ್ಷಕರು, ಇತರರು ಭಾಗವಹಿಸಿದ್ದರು.
ನೃತ್ಯ ಸಂಯೋಜಕ ತೇಜಸ್ ಗೌಡ ಮತ್ತು ತಂಡ, ದಾನಿಗಳು, ಶಿಕ್ಷಕರು, ವಿವಿಧ ಕ್ಷೇತ್ರದ ಗಣ್ಯರನ್ನು ಸತ್ಕರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.