ಚನ್ನಪಟ್ಟಣ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಲ್ಲೂಕಿನ ಚಕ್ಕೆರೆ ಬಳಿಯ ಪಾರೇತೆಕ್ಲು ಗ್ರಾಮದ ರಾಮೇಗೌಡ (43) ಅವರು ಸೋಮವಾರ ಮೃತಪಟ್ಟಿದ್ದಾರೆ.
ಕಳೆದ ವಾರ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ಸೋಮವಾರ ನಿಧನರಾಗಿದ್ದಾರೆ. ಇವರು ಬೆಸ್ಕಾಂನಲ್ಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಗ್ರಾಮದ ರುದ್ರಭೂಮಿಯಲ್ಲಿ ಸಂಜೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.