ಡಿ.ಕೆ.ಸುರೇಶ್ ಹಾಗೂ ಎಚ್.ಡಿ. ಕುಮಾರಸ್ವಾಮಿ
ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದಲ್ಲಿ ಬುಧವಾರ ಮಾಜಿ ಸಂಸದ ಡಿ.ಕೆ.ಸುರೇಶ್ ತಮ್ಮ ಭಾಷಣದ ಮಧ್ಯೆ ಚುನಾವಣೆ ವ್ಯವಸ್ಥೆ ಕುರಿತು ಎಚ್.ಡಿ. ಕುಮಾರಸ್ವಾಮಿ ಅವರು ಈ ಹಿಂದೆ ವಿಧಾನಸಭೆಯಲ್ಲಿ ಆಡಿದ ಮಾತಿನ ಆಡಿಯೊ ತುಣುಕು ಜನರಿಗೆ ಕೇಳಿಸಿದರು.
‘ಕ್ಷೇತ್ರದಲ್ಲಿ ಐದು ವರ್ಷ ಕೆಲಸ ಮಾಡಿ ಚುನಾವಣೆ ಗೆಲ್ಲೋದು ಕಷ್ಟ. ಚುನಾವಣೆಗೆ ಹತ್ತು ದಿನ ಇದೆ ಎನ್ನುವಾಗ ಈಗಿನ ಚುನಾವಣಾ ಪದ್ಧತಿಗೆ ತಕ್ಕಂತೆ ತಯಾರಾಗಿ ಹೋಗಿ ಕೆಲಸ ಮಾಡಿದರೆ ಚುನಾವಣೆ ಗೆಲ್ಲಬಹುದು ಎಂದು ಚನ್ನಪಟ್ಟಣ ಜನರ ಮತ ಪಡೆದು ಕಾಣೆಯಾಗಿದ್ದ ಕುಮಾರಸ್ವಾಮಿ ಅವರ ಮಾತುಗಳಿವು’ ಎಂದು ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಸಿ.ಡಿ ಬ್ರದರ್ಸ್‌ಗೆ ಸಿ.ಡಿ, ವಿಡಿಯೊ, ಆಡಿಯೊ ಮಾಡುವುದೇ ಕೆಲಸ. ಇದನ್ನು ಮಾಡುವುದರಲ್ಲಿ ಸಹೋದರರು ನಿಸ್ಸೀಮರು. ಹಾಸನದಲ್ಲಿ ಇಂತಹದೇ ಷಡ್ಯಂತ್ರ ಮಾಡಿದರು’ ಎಂದು ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.