ಚನ್ನಪಟ್ಟಣ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಬದುಕು ನಡೆಸಲು ಶಿಕ್ಷಣ ತುಂಬಾ ಮುಖ್ಯ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಅಭಿಪ್ರಾಯಪಟ್ಟರು.
ಶುಕ್ರವಾರ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜು ಮತ್ತು ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಅವಶ್ಯ ಎಂದರು.
ನಗರದ ವಿರಕ್ತಮಠದ ಶಿವರುದ್ರ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ದೇಶಿ ಸಂಸ್ಕೃತಿ ಅನುಸರಿಸಬೇಕು ಎಂದು ಕಿವಿಮಾತು ಹೇಳಿದರು.
ಶ್ರೀ ಮಹದೇಶ್ವರ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎಂ.ಬಿ.ರಾಹುಲ್ ರಾಜೇಅರಸ್ ಅಧ್ಯಕ್ಷತೆ ವಹಿಸಿದ್ದರು. ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ರಮೇಶ್ ಗೌಡ, ಜಿಲ್ಲಾ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕಿ ಎಂ.ಪಿ. ನಾಗಮ್ಮ, ರಾಜ್ಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಮತ್ತೀಕೆರೆ ಜಯರಾಮು, ಸರ್ಕಲ್ ಇನ್ ಸ್ಪೆಕ್ಟರ್ ಟಿ.ಟಿ. ಕೃಷ್ಣ, ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೊತ್ತೀಪುರ ಜಿ.ಶಿವಣ್ಣ, ನಿವೃತ್ತ ಪ್ರಾಂಶುಪಾಲ ನಿಂಗೇಗೌಡ, ಶಿಕ್ಷಣ ಸಂಯೋಜಕ ಗಂಗಾಧರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಟಿ. ನಾಗೇಶ್, ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಆರ್. ಆದರ್ಶಕುಮಾರ್, ಖಜಾಂಚಿ ಬಿ.ಎಸ್ ಹೇಮಲತಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.