ADVERTISEMENT

ಚನ್ನಪಟ್ಟಣ | ಕೆಂಗಲ್ ಹನುಮಂತಯ್ಯ ಸಮಾಧಿ ನಿರ್ಲಕ್ಷ್ಯ: ಖಂಡನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 6:25 IST
Last Updated 13 ಫೆಬ್ರುವರಿ 2026, 6:25 IST
ಚನ್ನಪಟ್ಟಣ ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಇರುವ ಕೆಂಗಲ್ ಹನುಮಂತಯ್ಯ ಅವರ ಸಮಾಧಿ ಬಳಿ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ, ಶ್ರೀನಿವಾಸ್, ಪ್ರಕಾಶ್ ಇದ್ದರು
ಚನ್ನಪಟ್ಟಣ ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಇರುವ ಕೆಂಗಲ್ ಹನುಮಂತಯ್ಯ ಅವರ ಸಮಾಧಿ ಬಳಿ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ, ಶ್ರೀನಿವಾಸ್, ಪ್ರಕಾಶ್ ಇದ್ದರು   

ಚನ್ನಪಟ್ಟಣ: ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸಮಾಧಿ ಸ್ಥಳವನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಿ ಪ್ರತಿಮೆ ನಿರ್ಮಿಸಬೇಕೆಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ ಒತ್ತಾಯಿಸಿದರು.

ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಸಮಾಧಿ ಸ್ಥಳದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವರ್ಷಗಳಿಂದ ಸಾರ್ವಜನಿಕರ ಒತ್ತಾಸೆ ನಿರ್ಲಕ್ಷ್ಯಿಸಿರುವ ಜಿಲ್ಲೆ ಹಾಗೂ ತಾಲ್ಲೂಕು ಆಡಳಿತದ ನಿರ್ಲಕ್ಷ್ಯ ಖಂಡನೀಯ ಎಂದು ಆರೋಪಿಸಿದರು.

‘ನಾಡಿನ ಅಪ್ರತಿಮ ರಾಜಕಾರಣಿ, ದೂರದೃಷ್ಟಿ ವಿಧಾನಸೌಧ ನಿರ್ಮಾತೃ ಸಮಾಧಿ ಸ್ಥಳ ಗೊತ್ತಿಲ್ಲದಂತೆ ಆಡಳಿತ ವರ್ತಿಸುತ್ತಿದೆ. ಬದುಕಿದ್ದಾಗ ಅವಮಾನ, ಮರಣ ನಂತರವೂ ಅವಮಾನ. ಕನಿಷ್ಠ ಸೌಜನ್ಯವೂ ಇಲ್ಲ’ ಎಂದು ಕಿಡಿಕಾರಿದರು.

ADVERTISEMENT

ಒಂದು ತಿಂಗಳ ಗಡುವು: ‘ಒಂದು ತಿಂಗಳೊಳಗೆ ಜಿಲ್ಲಾಡಳಿತ ಸಮಾಧಿ ಸ್ಥಳವನ್ನು ಸುಂದರ ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಕನ್ನಡಪರ, ರೈತಪರ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲಯ್ಯ ಮಾತನಾಡಿ, ಹನುಮಂತಯ್ಯ ಅನೇಕ ಜನಪರ ಕಾರ್ಯಗಳನ್ನು ಮಾಡಿದವರು. ಅವರ ಸಮಾಧಿ ನಿರ್ಲಕ್ಷ್ಯ ಖಂಡನೀಯ ಎಂದರು.

ಅಭಿಮಾನಿಗಳಾದ ಶ್ರೀನಿವಾಸ್, ಪ್ರಕಾಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.