ಚನ್ನಪಟ್ಟಣ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ಏಳನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿ, ನಗದು ರಹಿತ ಚಿಕಿತ್ಸೆ ಆರೋಗ್ಯ ಸಂಜೀವಿನಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳು, ಶಿಕ್ಷಕರ ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.