ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ ಲಭಿಸಿದೆ.
ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಹಾಗೂ ಕಂಚು ಬಳಸಿ ನಿರ್ಮಿಸಲಾಗಿರುವ ವಿಗ್ರಹವನ್ನು 2021ರಲ್ಲಿ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದೆ. 18 ಭುಜಗಳ ಸಿಂಹಾವರೂಢ ಪಂಚಲೋಹದ ವಿಗ್ರಹ 35 ಟನ್ ತೂಕವಿದೆ.
ಗೌಡಗೆರೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮುಖ್ಯಸ್ಥ ಸಾಗರ್ ಅವರು ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್ ಗುರೂಜಿ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದರು.
ಸಗಾಯಿರಾಜು, ಸಂಘಟಕ ಸಂಜೀವ ರೆಡ್ಡಿ, ಮಾಗನೂರು ಗಂಗರಾಜು, ನಿವೃತ್ತ ಪೊಲೀಸ್ ಅಧಿಕಾರಿ ರಾಮಕೃಷ್ಣಪ್ಪ, ಬಾಬು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.