ADVERTISEMENT

ಚನ್ನಪಟ್ಟಣ: ಹಾಪ್ ಕಾಮ್ಸ್ ಚುನಾವಣೆ 3 ಅಭ್ಯರ್ಥಿಗಳು ಕಣದಲ್ಲಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 4:44 IST
Last Updated 20 ಫೆಬ್ರುವರಿ 2026, 4:44 IST
ಚನ್ನಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ನಗರಸಭೆ ಅಧ್ಯಕ್ಷ ನಾಗೇಶ್, ಕಾಂಗ್ರೆಸ್ ಮುಖಂಡರು ಹಾಜರಿದ್ದರು
ಚನ್ನಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ನಗರಸಭೆ ಅಧ್ಯಕ್ಷ ನಾಗೇಶ್, ಕಾಂಗ್ರೆಸ್ ಮುಖಂಡರು ಹಾಜರಿದ್ದರು   

ಚನ್ನಪಟ್ಟಣ: ಬೆಂಗಳೂರು ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ (ಹಾಪ್ ಕಾಮ್ಸ್) ಮುಂದಿನ 5 ವರ್ಷಗಳ ಅವಧಿಗೆ ಫೆ.24ರಂದು ನಡೆಯುವ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ 5 ಮಂದಿ ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ ಇಬ್ಬರು ಅಭ್ಯರ್ಥಿಗಳು ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಈಗ 3 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮಾತ್ರ ಸ್ಪರ್ಧೆಯಲ್ಲಿದ್ದಾರೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಯಕುಮಾರ್, ಕೋಡಂಬಹಳ್ಳಿ ಶಿವಮಾದು, ಶ್ಯಾನುಭೋಗನಹಳ್ಳಿ ಪ್ರದೀಪ್ ಕುಮಾರ್ ಹಾಗೂ ಮೀಸಲು ಕ್ಷೇತ್ರದಿಂದ ಚಿರಂಜೀವಿ ಮತ್ತು ಭೈರಯ್ಯ ನಾಮಪತ್ರ ಸಲ್ಲಿಸಿದ್ದರು. ಈ ಐವರಲ್ಲಿ ಸಾಮಾನ್ಯ ಕ್ಷೇತ್ರದ ಜಯಕುಮಾರ್ ಮತ್ತು ಮೀಸಲು ಕ್ಷೇತ್ರದ ಚಿರಂಜೀವಿ ನಿವೃತ್ತಿ ಘೋಷಿಸಿದ್ದಾರೆ. ಜಿಲ್ಲೆಯ ಹಾಪ್ ಕಾಮ್ಸ್ ಸದಸ್ಯರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ನಿವೃತ್ತಿ ಘೋಷಿಸಿದ ಜಯಕುಮಾರ್ ಮತ್ತು ಚಿರಂಜೀವಿ ಮಾತನಾಡಿ, ಪಕ್ಷದ ವರಿಷ್ಠರ ಮನವಿ ಮೇರೆಗೆ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾಗಿ ತಿಳಿಸಿದರು.

ADVERTISEMENT

ಅಭ್ಯರ್ಥಿಗಳಾದ ಕೋಡಂಬಹಳ್ಳಿ ಶಿವಮಾದು, ಶ್ಯಾನುಭೋಗನಹಳ್ಳಿ ಎಸ್.ಪ್ರದೀಪ್ ಕುಮಾರ್, ಭೈರಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಕುಮಾರ್, ನಗರಸಭೆ ಅಧ್ಯಕ್ಷ ನಾಗೇಶ್, ಕಾಂಗ್ರೆಸ್ ಮುಖಂಡರಾದ ಡಿ.ಕೆ.ಕಾಂತರಾಜು, ರಾಂಪುರ ಮಲುವೇಗೌಡ, ಬೋರ್ವೆಲ್ ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಸಾಗರ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಚನ್ನಪಟ್ಟಣ: ಬೆಂಗಳೂರು ತೋಟದ ಬೆಳಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ (ಹಾಪ್ ಕಾಮ್ಸ್) ಮುಂದಿನ 5 ವರ್ಷಗಳ ಅವಧಿಗೆ ಫೆ.24 ರಂದು ನಡೆಯುವ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಕ್ಷೇತ್ರದಿಂದ ನಿರ್ದೇಶಕ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ 5 ಮಂದಿ ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಇಬ್ಬರು ಅಭ್ಯರ್ಥಿಗಳು ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗ 3 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಮಾತ್ರ ಸ್ಪರ್ಧೆಯಲ್ಲಿದ್ದಾರೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ನಗರದ ಹೊರವಲಯದ ಖಾಸಗಿ ಹೋಟೆಲ್ ನಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ಜಯಕುಮಾರ್, ಕೋಡಂಬಹಳ್ಳಿ ಶಿವಮಾದು, ಶ್ಯಾನುಭೋಗನಹಳ್ಳಿ ಪ್ರದೀಪ್ ಕುಮಾರ್, ಮೀಸಲು ಕ್ಷೇತ್ರದಿಂದ ಚಿರಂಜೀವಿ ಹಾಗೂ ಭೈರಯ್ಯ ನಾಮಪತ್ರ ಸಲ್ಲಿಸಿದ್ದರು. ಈ ಐದು ಮಂದಿಯಲ್ಲಿ ಸಾಮಾನ್ಯ ಕ್ಷೇತ್ರದ ಜಯಕುಮಾರ್, ಮೀಸಲು ಕ್ಷೇತ್ರದ ಚಿರಂಜೀವಿ ಅವರು ನಿವೃತ್ತಿ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಹಾಪ್ ಕಾಮ್ಸ್ ಸದಸ್ಯರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ನಿವೃತ್ತಿ ಘೋಷಣೆ ಮಾಡಿದ ಜಯಕುಮಾರ್, ಚಿರಂಜೀವಿ ಮಾತನಾಡಿ, ಪಕ್ಷದ ವರಿಷ್ಠರ ಮನವಿ ಮೇರೆಗೆ ಚುನಾವಣೆ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದರು.
ಅಭ್ಯರ್ಥಿಗಳಾದ ಕೋಡಂಬಹಳ್ಳಿ ಶಿವಮಾದು, ಶ್ಯಾನುಭೋಗನಹಳ್ಳಿ ಎಸ್. ಪ್ರದೀಪ್ ಕುಮಾರ್, ಭೈರಯ್ಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಕುಮಾರ್, ನಗರಸಭೆ ಅಧ್ಯಕ್ಷ ನಾಗೇಶ್, ಕಾಂಗ್ರೆಸ್ ಮುಖಂಡರಾದ ಡಿ.ಕೆ.ಕಾಂತರಾಜು, ರಾಂಪುರ ಮಲುವೇಗೌಡ, ಬೋರ್ ವೆಲ್ ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಸಾಗರ್, ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.