ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಬಳಸಿ: ಸಾಹಿತಿ ಮತ್ತೀಕೆರೆ ಚಲುವರಾಜು

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2025, 2:39 IST
Last Updated 24 ನವೆಂಬರ್ 2025, 2:39 IST
ಚನ್ನಪಟ್ಟಣ ತಾಲ್ಲೂಕಿನ ನಾಗವಾರ ಸಾರ್ವಜನಿಕ ಪ್ರೌಢಶಾಲೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ, ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಕೂ.ಗಿ ಗಿರಿಯಪ್ಪ ಅವರ 'ಜರ್ಮನಿಯಲ್ಲಿ ಬೆಂಗೆನ್' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಹಿರಿಯ ಸಾಹಿತಿ ಮತ್ತೀಕೆರೆ ಚಲುವರಾಜು, ಸಾರ್ವಜನಿಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಉಪಾಧ್ಯಕ್ಷ ಕೆಂಚೇಗೌಡ ಇತರರು ಭಾಗವಹಿಸಿದ್ದರು
ಚನ್ನಪಟ್ಟಣ ತಾಲ್ಲೂಕಿನ ನಾಗವಾರ ಸಾರ್ವಜನಿಕ ಪ್ರೌಢಶಾಲೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ, ಉಪನ್ಯಾಸ ಕಾರ್ಯಕ್ರಮದಲ್ಲಿ ಡಾ.ಕೂ.ಗಿ ಗಿರಿಯಪ್ಪ ಅವರ 'ಜರ್ಮನಿಯಲ್ಲಿ ಬೆಂಗೆನ್' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಹಿರಿಯ ಸಾಹಿತಿ ಮತ್ತೀಕೆರೆ ಚಲುವರಾಜು, ಸಾರ್ವಜನಿಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಉಪಾಧ್ಯಕ್ಷ ಕೆಂಚೇಗೌಡ ಇತರರು ಭಾಗವಹಿಸಿದ್ದರು   

ಚನ್ನಪಟ್ಟಣ: ‘ಕನ್ನಡಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಂಗ್ಲಭಾಷೆ ಬಳಸುವ ಬದಲು ಕನ್ನಡ ಭಾಷೆ ಬಳಸುವ ಮೂಲಕ ಕನ್ನಡವನ್ನು ಪ್ರಭಾವಯುತವಾಗಿ ಬೆಳೆಸಬೇಕು’ ಎಂದು ಹಿರಿಯ ಸಾಹಿತಿ ಮತ್ತೀಕೆರೆ ಚಲುವರಾಜು ಹೇಳಿದರು.

ತಾಲ್ಲೂಕಿನ ನಾಗವಾರ ಸಾರ್ವಜನಿಕ ಪ್ರೌಢಶಾಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಲೇಖಕರ ವೇದಿಕೆ, ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ಟ್ರಸ್ಟ್, ಸಿಂಗರಾಜಪುರ, ನಾಗವಾರ ಸಾರ್ವಜನಿಕ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ, ಉಪನ್ಯಾಸ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾರ್ವಜನಿಕ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಉಪಾಧ್ಯಕ್ಷ ಕೆಂಚೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಮಾತನಾಡಿದರು. ಅವರ ‘ಜರ್ಮನಿಯಲ್ಲಿ ಬೆಂಗೆನ್’ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ADVERTISEMENT

ಸಿಂ.ಲಿಂ.ನಾಗರಾಜು ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಶಂಭೂಗೌಡ ನಾಗವಾರ, ಕಾರ್ಯದರ್ಶಿ ಆದರ್ಶಕುಮಾರ್, ಸಾರ್ವಜನಿಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎನ್.ಬಿ.ಇಂದ್ರಕುಮಾರ್, ನಾಗವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಾಮಚಂದ್ರಪ್ಪ, ಹಿರಿಯ ಸಾಹಿತಿ ಎಲೆಕೇರಿ ಶಿವರಾಂ, ಪ್ರೌಢಶಾಲೆಯ ಮುಖ್ಯಶಿಕ್ಷಕ ಜಯರಾಮು ಭಾಗವಹಿಸಿದ್ದರು.

ಇದೇ ವೇಳೆ ನಡೆದ ಯುವ ಕವಿಗೋಷ್ಠಿಯಲ್ಲಿ ಹೊನ್ನಶ್ರೀ, ಎನ್.ಎಸ್.ಸೃಜನ, ನಮಿತಾ, ಸಿ.ಆರ್.ವೇದ, ಸಿಂಚನ, ಮೇಘನ, ಚಂದ್ರಿಕಾ, ರಕ್ಷಿತಾ ಸ್ವರಚಿತ ಕವನ ವಾಚನ ಮಾಡಿದರು. ಗಾಯಕ ಬೇವೂರು ರಾಮಯ್ಯ ಗೀತಗಾಯನ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.