ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಶಾಸಕ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಇತರರು ಇದ್ದರು
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಶಾಸಕ ಸಿ.ಪಿ.ಯೋಗೇಶ್ವರ್ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಐದು ವರ್ಷದೊಳಗಿನ 19,007 ಮಕ್ಕಳಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 106 ಬೂತ್ ಹಾಗೂ ನಗರ ಪ್ರದೇಶದಲ್ಲಿ 35 ಲಸಿಕಾ ಬೂತ್ ಸ್ಥಾಪಿಸಲಾಗಿದೆ. ಒಟ್ಟು 594 ಸಿಬ್ಬಂದಿ ನಾಲ್ಕು ದಿನ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಎಲ್ಲೆಡೆ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಿದ್ದಾರೆ ಎಂದರು.
ವೈದ್ಯರಾದ ರಘುರಾಮಯ್ಯ, ಧ್ಯಾನೇಶ್, ಶಿಲ್ಪ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.