ಚನ್ನಪಟ್ಟಣ: ಬೆಂಗಳೂರು–ಮೈಸೂರು ಹೆದ್ದಾರಿಯ ಕೆಂಗಲ್ ಬಳಿ ಮಂಗಳವಾರ ಸಂಜೆ ಎದುರಿನಿಂದ ಬಂದ ವಾಹನಕ್ಕೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ಬಿಜಿಎಸ್ ಶಾಲಾ ವಾಹನದಲ್ಲಿದ್ದ ಮಕ್ಕಳು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.
ಶಾಲಾ ವಾಹನ ಚಲಾಯಿಸುತ್ತಿದ್ದ ಚಾಲಕ ಮದ್ಯಪಾನ ಮಾಡಿದ್ದ ಎಂದು ಆರೋಪಿಸಿ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಾಲಾ ವಾಹನ ಜಖಂಗೊಂಡಿದೆ.
ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.