ಚನ್ನಪಟ್ಟಣ: ಭೀಮನ ಅಮಾವಾಸ್ಯೆ ಪ್ರಯುಕ್ತ ಮಹದೇಶ್ವರ ನಗರದ ಮಲೈ ಮಹದೇಶ್ವರ ದೇವಸ್ಥಾನದಲ್ಲಿ ಭಾನುವಾರ ವಿವಿಧ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ, ಸ್ವಾಮಿಯ ಹುಲಿವಾಹನ ಮೆರವಣಿಗೆ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆಯಿಂದಲೇ ನೂರಾರು ಭಕ್ತರು ಸರದಿಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲಿ ಮಲೈ ಮಹದೇಶ್ವರ ಸ್ನೇಹ ಬಳಗ ಹಾಗೂ ರೋಟರಿ ಟಾಯ್ಸ್ ಸಿಟಿ ಕ್ಲಬ್ ಚನ್ನಪಟ್ಟಣ ಸಹಯೋಗದಲ್ಲಿ 13ನೇ ವರ್ಷದ ಅನ್ನಸಂತರ್ಪಣೆ ಆಯೋಜಿಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಆರಂಭವಾದ ಅನ್ನಸಂತರ್ಪಣೆ ಕಾರ್ಯಕ್ರಮ ಸಂಜೆ 5 ಗಂಟೆಯವರೆಗೆ ಮುಂದುವರೆಯಿತು. ಸಾವಿರಾರು ಭಕ್ತರು ಮುದ್ದೆ, ಆವರೆಕಾಳು ಸಾಂಬಾರು, ಬೂಂದಿ ಪಾಯಸ ಸವಿದರು.
ಮಲೈ ಮಹದೇಶ್ವರ ಸ್ನೇಹ ಬಳಗದ ಅಧ್ಯಕ್ಷ ಉಮೇಶ್ ರಾಂಪುರ, ಗೌರವಾಧ್ಯಕ್ಷ ರವಿಕುಮಾರ್, ಪದಾಧಿಕಾರಿಗಳು, ರೋಟರಿ ಟಾಯ್ಸ್ ಸಿಟಿ ಕ್ಲಬ್ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಯೋಗೇಶ್ ಚಕ್ಕೆರೆ, ಕ್ಲಬ್ ಅಡ್ವೈಸರ್ ಬಿ.ಎಂ.ನಾಗೇಶ್ ಮತ್ತು ಇತರ ಪದಾಧಿಕಾರಿಗಳು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಿದರು.
ತಾಲ್ಲೂಕಿನ ವಿವಿಧ ದೇವಸ್ಥಾನಗಳಲ್ಲಿ ಭೀಮನ ಅಮವಾಸ್ಯೆ ವಿಶೇಷಪೂಜೆ ನೆರವೇರಿತು. ಹಲವೆಡೆ ಭಕ್ತರಿಗೆ ಅನ್ನಸಂತರ್ಪಣೆ, ಪ್ರಸಾದ ವಿನಿಯೋಗ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.