
ಚನ್ನಪಟ್ಟಣ: ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ವೈಭವ-2026 ಶಾಲಾ ವಾರ್ಷಿಕೋತ್ಸವ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೋಡಂಬಹಳ್ಳಿ ಗ್ರಾ.ಪಂ. ಪಿಡಿಒ ಭಾಗ್ಯಲಕ್ಷ್ಮಮ್ಮ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾ.ಪಂ. ವತಿಯಿಂದ ಶಾಲೆಯ ಅಭಿವೃದ್ಧಿಗೆ ಬೇಕಾದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಎಚ್.ಚೌಡಯ್ಯ, ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯಗಳು ಉತ್ತಮವಾಗಿವೆ. ಮುಂದಿನ ದಿನಗಳಲ್ಲಿಯೂ ಶಾಲೆಯ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಪಟೇಲ್ ಕೃಷ್ಣೇಗೌಡ, ಎಚ್.ವಿ.ಮುತ್ತುರಾಜು, ವಾಸು, ಈರಾಜು, ಬಿ.ಕೆ. ಶ್ರೀಧರ್, ಚಿಕ್ಕಮುತ್ತಯ್ಯ, ಎನ್. ನಿಂಗರಾಜು, ಮುಖಂಡರಾದ ಬಸವರಾಜು, ಕೆ.ಪಿ. ಮಹೇಂದ್ರ, ಕೆ.ಎಸ್.ನಾಗರಾಜು, ಡಿ.ಶಿವಬೀರಯ್ಯ, ಮುಖ್ಯಶಿಕ್ಷಕ ಎಂ.ಜೆ.ನಾಗರಾಜು ಇದ್ದರು.
ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.