
ಚನ್ನಪಟ್ಟಣ: ದ್ವಿಚಕ್ರ ವಾಹನ ಕಳವು ಮಾಡಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬೆಂಗಳೂರಿನ ಪ್ರೀತಂ (22) ಮತ್ತು ಜೀವನ್ (21) ಬಂಧಿತ ಆರೋಪಿಗಳು. ಬಂಧಿತರಿಂದ 2.15 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಆಟೊವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರನಗರ ಬಡಾವಣೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಎರಡು ದ್ವಿಚಕ್ರ ವಾಹನಗಳನ್ನು ರಾತ್ರಿ ಕದ್ದು ಪರಾರಿಯಾಗಿದ್ದರು. ಈ ಸಂಬಂಧ ಭರತ್ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ, ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಠಾಣೆ ಸಬ್ ಇನ್‌ಸ್ಪೆಕ್ಟರ್ ರಾಜು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.