ಬಿಡದಿ: ಪಟ್ಟಣದ ಧನಲಕ್ಷ್ಮಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಜನತಾ ಕಾಲೋನಿ ನಿವಾಸಿ ಶಿವರಾಜು (42) ಮೃತರು.
ಇದು ಆತ್ಯಹತ್ಯೆ ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಬಿಡದಿ ಪೋಲಿಸರ ತಂಡ ಭೇಟಿ ನೀಡಿ, ಸ್ಥಳ ಪರಿಶೀಲಿಸಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಯಿತು. ಬಿಡದಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತದೆ.
ಶಿವರಾಜು ಅವರು ಲಾರಿ ಚಾಲಕರಾಗಿ ವೃತ್ತಿ ಜೀವನ ಆರಂಭಿಸಿ ಲಾರಿ ಮಾಲೀಕರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.