
ಹಾರೋಹಳ್ಳಿ ತಾಲೂಕಿನ ಅರೆಕಡುಕಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು
ಹಾರೋಹಳ್ಳಿ: ತಾಲ್ಲೂಕಿನ ಅರೆಕಡುಕಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪಂಡಿತ್ ಜವಾಹರ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಮುಖ್ಯ ಶಿಕ್ಷಕ ಚಂದ್ರಶೇಖರ್ ಮಾತನಾಡಿ, ಮಕ್ಕಳು ದೇಶದ ಭವಿಷ್ಯ, ಅವರಿಗೆ ಸರಿಯಾದ ಶಿಕ್ಷಣ ನೀಡಬೇಕು. ಅವರ ಬದುಕು ಹಸನುಗೊಳಿಸಲು ಬೇಕಾದ ವ್ಯವಸ್ಥೆ ಕಲ್ಪಿಸಬೇಕು. ಮಕ್ಕಳ ಬಗ್ಗೆ ಅಪಾರವಾದ ಪ್ರೀತಿ ಹೊಂದಿದ್ದ ನೆಹರು ಜಯಂತಿಯಂದೇ ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣದ ಮಹತ್ವವನ್ನು ಸಾರುವ ಸಲುವಾಗಿ ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಸಂದರ್ಭದಲ್ಲಿ ಶಿಕ್ಷಕಿಯರಾದ ನಾಗರತ್ನ ನಾಗಮಣಿ, ಎಸ್‌ಡಿಎಂಸಿ ಅಧ್ಯಕ್ಷ ಕೆಂಪರಾಜು, ಗ್ರಾಮಸ್ಥರಾದ ರಾಜು, ಮಲ್ಲಯ್ಯ, ಮಲ್ಲೇಶ, ಮಹೇಶ, ರಾಜೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.