ADVERTISEMENT

ಚೂಡಳ್ಳಿ ಪಂಚಾಯಿತಿಗೆ ವೆಂಕಟರಾಯನದೊಡ್ಡಿ ರಾಮು ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2024, 16:09 IST
Last Updated 23 ಫೆಬ್ರುವರಿ 2024, 16:09 IST
ವೆಂಕಟರಾಯನದೊಡ್ಡಿ ರಾಮು
ವೆಂಕಟರಾಯನದೊಡ್ಡಿ ರಾಮು   

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಚೂಡಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಆಯ್ಕೆಗಾಗಿ ಗುರುವಾರ ನಡೆದ ಚುನಾವಣೆಯಲ್ಲಿ ವೆಂಕಟರಾಯನದೊಡ್ಡಿ ರಾಮು ಅವಿರೋಧವಾಗಿ ಆಯ್ಕೆಯಾದರು.

ಪಂಚಾಯಿತಿಗೆ ಈ ಹಿಂದೆ ಅಧ್ಯಕ್ಷರಾಗಿದ್ದ ಮಹೇಶ್ ನೀಡಿದ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದ್ದು ಉಪನೋಂದಣಾಧಿಕಾರಿ ಎ.ಸುರೇಶ್ ಗುರುವಾರ ಚುನಾವಣೆ ನಡೆಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ರಮೇಶ್ ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ಸೇರಿದಂತೆ 15 ಮಂದಿ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಮು ಅವರನ್ನು ಮುಖಂಡರಾದ ರಾಮಣ್ಣ, ನಟೇಶ್, ಬಾಬು ಸೇರಿದಂತೆ ಪಂಚಾಯಿತಿ ಸದಸ್ಯರು ಅಭಿನಂದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.