ADVERTISEMENT

ರಾಮನಗರ: ಎಎಸ್‌ಐ ಕುಮಾರ್‌ಗೆ ಸಿ.ಎಂ ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2025, 16:20 IST
Last Updated 31 ಮಾರ್ಚ್ 2025, 16:20 IST
ಎಚ್.ಎಂ. ಕುಮಾರ್
ಎಚ್.ಎಂ. ಕುಮಾರ್   

ರಾಮನಗರ: ಜಿಲ್ಲೆಯ ಚನ್ನಪಟ್ಟಣದ ಕನಕ ನಗರದ ನಿವಾಸಿಯಾಗಿರುವ ಬೆಂಗಳೂರಿನ ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಎಎಸ್‌ಐ ಎಚ್.ಎಂ. ಕುಮಾರ್ ಅವರು ರಾಜ್ಯ ಸರ್ಕಾರದ 2024ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಏಪ್ರಿಲ್ 2ರಂದು ನಡೆಯಲಿರುವ ಪೊಲೀಸ್ ಧ್ವಜ ದಿನಾಚರಣೆಯಂದು ಚಿನ್ನದ ಪದಕ ಪ್ರದಾನ ಸಮಾರಂಭ ನಡೆಯಲಿದೆ.

ಮಲ್ಲಯ್ಯ ಮತ್ತು ಹುಚ್ಚಮ್ಮ ದಂಪತಿ ಪುತ್ರನಾದ ಕುಮಾರ್ ಅವರು 1996ರಲ್ಲಿ ಪೊಲೀಸ್ ಇಲಾಖೆ ಸೇರಿದರು. ಸೇವಾವಧಿಯಲ್ಲಿ ವಿವಿಧ ಪ್ರಕರಣಗಳನ್ನು ಭೇದಿಸುವಲ್ಲಿ ಕುಮಾರ್‌ ಅವರು ಪ್ರಶಂಶನೀಯವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT