ADVERTISEMENT

ಸಹಕಾರ ಸಂಘಗಳು ರೈತರಿಗೆ ವರದಾನ: ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ

ಅಂಜನಾಪುರದಲ್ಲಿ ಉಗ್ರಾಣ ನಿರ್ಮಾಣಕ್ಕೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 11:18 IST
Last Updated 4 ಸೆಪ್ಟೆಂಬರ್ 2021, 11:18 IST
ವಿಭೂತಿಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಗ್ರಾಣ ಕಟ್ಟಡ ನಿರ್ಮಾಣಕ್ಕೆ ಅಂಜನಾಪುರ ಗ್ರಾಮದಲ್ಲಿ ಶುಕ್ರವಾರ ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಲಿಂಗಪ್ಪ ಭೂಮಿಪೂಜೆ ನೆರವೇರಿಸಿದರು
ವಿಭೂತಿಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಗ್ರಾಣ ಕಟ್ಟಡ ನಿರ್ಮಾಣಕ್ಕೆ ಅಂಜನಾಪುರ ಗ್ರಾಮದಲ್ಲಿ ಶುಕ್ರವಾರ ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಲಿಂಗಪ್ಪ ಭೂಮಿಪೂಜೆ ನೆರವೇರಿಸಿದರು   

ರಾಮನಗರ: ಗ್ರಾಮೀಣ ಪ್ರದೇಶದ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ವರದಾನವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ತಿಳಿಸಿದರು.

ಕೈಲಾಂಚ ಹೋಬಳಿಯ ವಿಭೂತಿಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಗ್ರಾಣ ಕಟ್ಟಡ ನಿರ್ಮಾಣಕ್ಕೆ ಅಂಜನಾಪುರ ಗ್ರಾಮದಲ್ಲಿ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಸಹಕಾರ ಸಂಘಗಳು ಉತ್ತಮವಾಗಿದ್ದರೆ ರೈತರಿಗೆ ಅನುಕೂಲ. ನನ್ನ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ಬೀಜ, ಗೊಬ್ಬರ, ಪಡಿತರ ಸಂಗ್ರಹ ಉಗ್ರಾಣ ಕಟ್ಟಡಕ್ಕೆ ₹ 5 ಲಕ್ಷ ಅನುದಾನ ನೀಡಲಾಗಿದೆ. ಉಗ್ರಾಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡರೆ ಮುಂದಿನ ದಿನಗಳಲ್ಲಿ ಇನ್ನೂ ₹ 5 ಲಕ್ಷ ಅನುದಾನ ನೀಡುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

‘ಈ ಭಾಗದಲ್ಲಿ ಸಮಸ್ಯೆ ಇರುವಂತಹ ಊರುಗಳಲ್ಲಿ ಅಂಜನಾಪುರವು ಒಂದು. ಹೆಚ್ಚಿನ ಆಶ್ರಯ ಮನೆಗಳನ್ನು ಈ ಭಾಗದಲ್ಲಿಯೇ ನೀಡಲಾಗಿದೆ. ಈ ಭಾಗದ ಸಮಸ್ಯೆ ನಿವಾರಣೆಗೆ ಸಾಧ್ಯವಷ್ಟು ಪ್ರಯತ್ನ ಪಡುತ್ತೇನೆ’ ಎಂದು ತಿಳಿಸಿದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎರೇಹಳ್ಳಿ ಮಂಜು ಮಾತನಾಡಿ, ತಾಲ್ಲೂಕಿನಲ್ಲಿ ಗೊಬ್ಬರ ದಾಸ್ತಾನು ಉಗ್ರಾಣಕ್ಕೆ ಕೈಲಾಂಚ ಹೋಬಳಿಯ ಹುಣಸನಹಳ್ಳಿ ಗ್ರಾಮದಲ್ಲಿ ಜಾಗ ಗುರುತಿಸಲಾಗಿದೆ. ಉಗ್ರಾಣದಲ್ಲಿ ರಸಗೊಬ್ಬರ, ಬೀಜ ಸಂಗ್ರಹಿಸಿ ಜಿಲ್ಲೆಯ ಎಲ್ಲಾ ಸಂಘಗಳಿಗೆ ವಿತರಣೆ ಮಾಡಲಾಗುವುದು ಎಂದರು.

ತಾ.ಪಂ. ಮಾಜಿ ಅಧ್ಯಕ್ಷರಾದ ಭದ್ರಯ್ಯ, ಗಾಣಕಲ್ ನಟರಾಜ್, ಗ್ರಾ.ಪಂ. ಮಾಜಿ ಅಧ್ಯಕ್ಷ ಶಿವಲಿಂಗಪ್ರಸಾದ್, ಮಾಜಿ ಉಪಾಧ್ಯಕ್ಷೆ ಸುಂದರಮ್ಮ ರಾಜಣ್ಣ, ಗ್ರಾ.ಪಂ. ಸದಸ್ಯರಾದ ಮಹದೇವಮ್ಮ, ರಂಗಸ್ವಾಮಿ, ಮುಖಂಡರಾದ ಚಂದ್ರಶೇಖರ್, ವಾಸುನಾಯಕ, ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಕಿರಣ್‍ಕುಮಾರ್, ಸಂಘದ ಆಡಳಿತಾಧಿಕಾರಿ ಜಗದೀಶ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಾಂತಕುಮಾರ್, ಮೇಲ್ವಿಚಾರಕ ನವೀನ್‍ಕುಮಾರ್, ಸಂಘದ ಮಾಜಿ ಅಧ್ಯಕ್ಷ ನಟರಾಜು, ಮಾಜಿ ಉಪಾಧ್ಯಕ್ಷ ಪಿ. ನಾಗರಾಜು, ಮಾಜಿ ನಿರ್ದೇಶಕರಾದ ಶಿವಕುಮಾರ್, ಜಯಣ್ಣ, ಸಿದ್ದಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.