ADVERTISEMENT

ಚನ್ನಪಟ್ಟಣ: ವೈದ್ಯರೊಬ್ಬರಿಗೆ ಕೋವಿಡ್, ಆಸ್ಪತ್ರೆ ಸೀಲ್ ಡೌನ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 14:50 IST
Last Updated 13 ಜುಲೈ 2020, 14:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚನ್ನಪಟ್ಟಣ: ಪಟ್ಟಣದ ಕುವೆಂಪುನಗರ 2ನೇ ಅಡ್ಡರಸ್ತೆ ಖಾಸಗಿ ನರ್ಸಿಂಗ್ ಹೋಂ ವೈದ್ಯರೊಬ್ಬರಿಗೆ ಕೋವಿಡ್‌ –19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಮವಾರ ರಸ್ತೆಯನ್ನುಸೀಲ್ ಡೌನ್ ಮಾಡಲಾಗಿದೆ.

ಸೋಂಕು ಕಾಣಿಸಿಕೊಂಡ ವೈದ್ಯರನ್ನು ಅದೇ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಕೊರೊನಾ ವಿಶೇಷ ವಾರ್ಡ್‌ನ ದಾಖಲಿಸಲಾಗಿದೆ. ಇವರು ಹದಿನೈದು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಇದ್ದ ಇಬ್ಬರು ವ್ಯಕ್ತಿಗಳಿಗೆ ಚಿಕಿತ್ಸೆ ನೀಡಿದ್ದರು.

ವೈದ್ಯರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದರು. ಹಾಗಾಗಿ ಯಾವುದೇ ರೋಗಿಗಳನ್ನು ಪರೀಕ್ಷೆ ಮಾಡಿರಲಿಲ್ಲ. ಆದರೂ, ರೋಗಿಗಳ ಪಟ್ಟಿ ಸಿದ್ಧಗೊಳಿಸಲಾಗುತ್ತಿದ್ದು ಅವರನ್ನು ಪರೀಕ್ಷೆ ಮಾಡಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ತಿಳಿಸಿದರು.

ADVERTISEMENT

ಆಸ್ಪತ್ರೆಯಲ್ಲಿರುವ ಇತರ ವೈದ್ಯರು, ನರ್ಸ್, ಸಿಬ್ಬಂದಿ ಸೇರಿದಂತೆ ಎಲ್ಲರ ಪರೀಕ್ಷೆ ನಡೆಸಲಾಗಿದ್ದು ಅವರಲ್ಲಿ ರೋಗ ಲಕ್ಷಣ ಕಂಡು ಬಂದಿಲ್ಲ. ಮತ್ತೊಮ್ಮೆ ಅವರೆಲ್ಲರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜನರಲ್ಲಿ ಭೀತಿ: ವೈದ್ಯರಿಗೆ ಸೋಂಕು ತಗುಲಿರುವ ವಿಚಾರ ತಾಲ್ಲೂಕಿನಲ್ಲಿ ಹರಡಿ ಜನರು ಭಯಭೀತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.