ADVERTISEMENT

ಕನಕಪುರ: ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ

​ಪ್ರಜಾವಾಣಿ ವಾರ್ತೆ
Published 29 ಮೇ 2025, 15:15 IST
Last Updated 29 ಮೇ 2025, 15:15 IST
ಕನಕಪುರ ರೂರಲ್ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು 
ಕನಕಪುರ ರೂರಲ್ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು    

ಕನಕಪುರ: ಇಲ್ಲಿನ ರೂರಲ್ ಎಜುಕೇಶನ್ ಸೊಸೈಟಿಯ ರೂರಲ್ ಕಾಲೇಜಿನಲ್ಲಿ ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಈ ವೇಳೆ ಮೈಸೂರು ಮುಕ್ತ ವಿಶ್ವವಿದ್ಯಾಲಯ ಉಪ ಕುಲಪತಿ ಶರಣಪ್ಪ ಹಲ್ಸೆ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಗುರಿ ಮುಖ್ಯ. ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡಾಗ ಮಾತ್ರ ಉತ್ತಮರಾಗಿ ರೂಪುಗೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಗುರುವಿನ ಮಹತ್ವ ಅರಿತು ನಡೆದರೆ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ. ಅದನ್ನು ಅರ್ಥ ಮಾಡಿಕೊಳ್ಳುವ ವಿವೇಕ ಮತ್ತು ವಯಸ್ಸು ನಿಮ್ಮದಾಗಿದೆ ಎಂದರು.

ADVERTISEMENT

ಹುಣಸೂರು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮೇಗೌಡ ಮಾತನಾಡಿ, ನಾನು ಕಾಲೇಜಿನಲ್ಲಿ ಉತ್ತಮ ಪ್ರಾಂಶುಪಾಲರಾಗಿ ಹೊರಹೊಮ್ಮಲು ರೂರಲ್ ಕಾಲೇಜು ಕಾರಣ ಎಂದು ಸ್ಮರಿಸಿದರು.

ಆರ್‌ಇಎಸ್ ಅಧ್ಯಕ್ಷ ಎಚ್.ಕೆ.ಶ್ರೀಕಂಠ, ಪುಟ್ಟಸ್ವಾಮಿ, ಮಂಜುನಾಥ್, ಎಂ.ಟಿ.ಬಾಲಕೃಷ್ಣ, ದೇವರಾಜು, ಡಾ.ಅಪ್ಪಾಜಿ, ಡಾ.ತಮ್ಮಣ್ಣ ಗೌಡ ಸೇರಿದಂತೆ ಎಲ್ಲಾ ಬೋಧಕ, ಬೋಧಕೇತರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.