ADVERTISEMENT

ರಾಮನಗರ | ಮತೀಯ ಭಾವನೆಗೆ ಧಕ್ಕೆ: ಕ್ರೈಸ್ತ ದಂಪತಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 6:11 IST
Last Updated 2 ನವೆಂಬರ್ 2022, 6:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಮತೀಯ ಭಾವನೆಗೆ ಧಕ್ಕೆ ಹಾಗೂ ಮತಾಂತರ ಯತ್ನ ಆರೋಪದ ಮೇಲೆ ಕನಕಪುರದ ಕ್ರೈಸ್ತ ಧರ್ಮ ಪ್ರಚಾರಕ ಹಾಗೂ ಅವರ ಪತ್ನಿ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.

ಪ್ರಕರಣ ಸಂಬಂಧ ಬರ್ನಾಬಸ್ ಮತ್ತು ಅವರ ಮಡದಿ ಬೇಬಿ ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮತೀಯ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್‌ 295ಎ ಅಡಿ ಪ್ರಕರಣ ದಾಖಲಾಗಿದೆ. ವಿಚಾರಣೆ ಮುಂದುವರಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದರು.

ಕನಕಪುರ ಪಟ್ಟಣದ ನವಾಜಿ ಬೋರೆಯಲ್ಲಿರುವ ಬೇತೆಲ್‌ ಐಸಿಆರ್‌ಎಂ ಪ್ರಾರ್ಥನಾ ಮಂದಿರದಲ್ಲಿ ಕನಕಪುರ ತಾಲ್ಲೂಕಿನ ಚಿಕ್ಕಮುದವಾಡಿ ಸಮೀಪದ ತಾಂಡವೊಂದರ ಬುಡಕಟ್ಟು ಸಮುದಾಯದ ಹತ್ತಕ್ಕೂ ಹೆಚ್ಚು ಜನರನ್ನು ಇರಿಸಲಾಗಿದೆ. ಮಂಗಳವಾರ ಅವರನ್ನು ಬೆಂಗಳೂರಿನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಕರೆದೊಯ್ಯಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಘಟನೆ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದರು.

ADVERTISEMENT

ಈ ಮಾಹಿತಿ ಆಧರಿಸಿ ಕನಕಪುರ ಪೊಲೀಸರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.