ADVERTISEMENT

ರಾಮನಗರ: ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 9:10 IST
Last Updated 6 ಸೆಪ್ಟೆಂಬರ್ 2021, 9:10 IST
ನಾಲ್ಕನೇ ವಾರ್ಡಿನ ವಿಜೇತೆ ತೇಜಸ್ವಿನಿ‌ ಸುರೇಶ್ ಅವರನ್ನು  ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು
ನಾಲ್ಕನೇ ವಾರ್ಡಿನ ವಿಜೇತೆ ತೇಜಸ್ವಿನಿ‌ ಸುರೇಶ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು   

ರಾಮನಗರ: ಇಲ್ಲಿನ ನಗರಸಭೆಯ ನಾಲ್ಕನೇ ವಾರ್ಡಿಗೆ ಉ‌ಪ‌ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ತೇಜಸ್ವಿನಿ ಸುರೇಶ್ 899 ಮತಗಳ ಭಾರಿ ಅಂತರದಿಂದ ಗೆಲುವು ದಾಖಲಿಸಿದರು.

ಈ ಹಿಂದೆಯೂ ಇಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿತ್ತು. ಪಕ್ಷದ ಅಭ್ಯರ್ಥಿಯಾಗಿದ್ದ ಲೀಲಾವತಿ ಗೋವಿಂದರಾಜು ಜಯಗಳಿಸಿದ್ದರು. ಆದರೆ ಫಲಿತಾಂಶ ಪ್ರಕಟಕ್ಕೆ ಮುನ್ನವೇ ಅವರು ಕೋವಿಡ್ ನಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯಿತು.

ರಾಮನಗರ ನಗರಸಭೆಯ 31 ವಾರ್ಡುಗಳ ಪೈಕಿ 19 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದ್ದು, ಸ್ಪಷ್ಟ ಬಹುಮತ ಹೊಂದಿದೆ. ಕೋವಿಡ್ ಕಾರಣಕ್ಕೆ ಇನ್ನೂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.