ADVERTISEMENT

140 ಶಾಸಕರಿರುವ ಕಾಂಗ್ರೆಸ್ ಸರ್ಕಾರ ಬೀಳುತ್ತಾ: ಎಚ್.ಸಿ.ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 14:00 IST
Last Updated 1 ಜುಲೈ 2025, 14:00 IST
ಮಾಗಡಿ ತಾಲ್ಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಶಾಸಕ ಎಚ್.ಸಿ.ಬಾಲಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದರು 
ಮಾಗಡಿ ತಾಲ್ಲೂಕಿನ ಮತ್ತಿಕೆರೆ ಗ್ರಾಮದಲ್ಲಿ ಶಾಸಕ ಎಚ್.ಸಿ.ಬಾಲಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದರು    

ಮಾಗಡಿ: 140 ಶಾಸಕರು ಇರುವ ಕಾಂಗ್ರೆಸ್ ಸರ್ಕಾರ ಪತನವಾಗಲು ಸಾಧ್ಯವೇ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ  ಪ್ರಶ್ನಿಸಿದ್ದಾರೆ.

ತಾಲ್ಲೂಕಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಎಂದು ಬಿಜೆಪಿಯುವರು ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸರ್ಕಾರದ ಆಡಳಿತ ವೈಖರಿ ನೋಡಿ ಬಿಜೆಪಿಗರಿಗೆ ಭ್ರಮನಿರಸನ ಆಗಿದೆ. ಹಾಗಾಗಿ ಬುರುಡೆ ಬಿಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.