ADVERTISEMENT

ಕಾಂಗ್ರೆಸ್‌ನ 15 ಶಾಸಕರು ಬಿಜೆಪಿ ಸಂಪರ್ಕದಲ್ಲಿ: ನಳಿನ್ ಕುಮಾರ್ ಕಟೀಲ್‌

​ಪ್ರಜಾವಾಣಿ ವಾರ್ತೆ
Published 30 ಜುಲೈ 2020, 12:50 IST
Last Updated 30 ಜುಲೈ 2020, 12:50 IST
ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್   

ರಾಮನಗರ:'ಈಗಾಗಲೇ ಕಾಂಗ್ರೆಸ್‌ನ 15 ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿ‌ನ್‌ಕುಮಾರ್‍ ಕಟೀಲ್‌ ಹೇಳಿದರು.

ನಗರದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರೊಂದಿಗಿನ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು 'ಸಿ.ಪಿ. ಯೋಗೇಶ್ವರ್‌ ನನ್ನ ಸಂಪರ್ಕದಲ್ಲಿ ಇದ್ದರು’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‍ ಹೇಳಿಕೆ ಕುರಿತು ಹೀಗೆ ಪ್ರತಿಕ್ರಿಯಿಸಿದರು. 'ಅವರ ಪಕ್ಷದ ಅನೇಕರು ನನ್ನ ಸಂಪರ್ಕದಲ್ಲೂ ಇದ್ದಾರೆ'ಎಂದರು.

'ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪರೋಕ್ಷವಾಗಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆ’ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, 'ಈ ಬಗ್ಗೆ ನಾನು ಹೆಚ್ಚು ಉಲ್ಲೇಖ ಮಾಡುವುದಿಲ್ಲ’ ಎಂದಷ್ಟೇ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.