ರಾಮನಗರ: ‘ ಸಿ. ಪಿ. ಯೋಗೇಶ್ವರ್ ಮಂತ್ರಿಯಾಗಲು ಹೊಸ ನಾಟಕ ಶುರು ಮಾಡಿದ್ದಾರೆ. ಮುಂದೆ ಏನಾಗುತ್ತದೆಯೋ ನೋಡೋಣ’ ಎಂದು ಸಂಸದ ಡಿ.ಕೆ. ಸುರೇಶ್ ವ್ಯಂಗ್ಯವಾಡಿದರು.
ಕಾಂಗ್ರೆಸ್‌ನಿಂದ ಹಲವರು ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂಬ ಯೋಗೇಶ್ವರ್ ಹೇಳಿಕೆ ಕುರಿತು ಅವರು ಬಿಡದಿಯಲ್ಲಿ ಗುರುವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು. ‘15ರ ನಂತರ ಚಿತ್ರಣ ಬದಲಾಗುತ್ತದೆ ಎಂದು ಅವರೇ ಹೇಳಿದ್ದಾರೆ. ನಾವೂ ಕೂಡ ಕಾಯುತ್ತಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ಆಗುತ್ತಾರ? ಯಾವುದಾದರೂ ಸಿ.ಡಿ. ಬಿಡುಗಡೆ ಮಾಡುತ್ತಾರ? ಅಥವಾ ಯಾವುದಾದರೂ ಪರೀಕ್ಷೆ ಬರೆಯುತ್ತಾರ ಎಂದು ಅವರೇ ಹೇಳಬೇಕು’ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.