ADVERTISEMENT

ಮಾಗಡಿ: ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 5:08 IST
Last Updated 12 ಜೂನ್ 2021, 5:08 IST
ಮಾಗಡಿಯಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಸಿ.ಎಸ್‌.ಗಂಗಾಧರ್‌ ತಂಡದವರು ಪ್ರತಿಭಟನೆ ನಡೆಸಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಕೆಂಚೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಕುಮಾರ್, ನಿವೃತ್ತ ಶಿಕ್ಷಕ ಮರಿಗೌಡ, ರಾಮಕೃಷ್ಣಯ್ಯ, ಗೌಡಯ್ಯ ಇದ್ದರು

ಮಾಗಡಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪಟ್ಟಣ ಮತ್ತು ತಿಪ್ಪಸಂದ್ರ ಗೇಟ್‌ ರಸ್ತೆ ಪಾಳ್ಯದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಸ್‌. ಗಂಗಾಧರ್ ಮಾತನಾಡಿ, ಕೇಂದ್ರ ಸರ್ಕಾರ ಕೊರೊನಾ ಸಂಕಷ್ಟದ ಸಮಯದಲ್ಲಿ ಪೆಟ್ರೋಲ್ ಡೀಸಲ್ ಬೆಲೆ ಏರಿಕೆಯಿಂದ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಸಿದ್ದು ಸರಿಯಲ್ಲ. ಕೂಡಲೇ ಪೆಟ್ರೋಲ್ ಬೆಲೆಯನ್ನು ಇಳಿಸುವ ಮೂಲಕ ಜನ ಸಾಮಾನ್ಯರಿಗೆ ಅನುಕೂಲ ಮಾಡಬೇಕು ಎಂದರು.

ಗ್ರಾ.ಪಂ. ಮಾಜಿ ಅಧ್ಯಕ್ಷ ಕೆಂಚೇಗೌಡ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಕುಮಾರ್, ನಿವೃತ್ತ ಶಿಕ್ಷಕ ಮರಿಗೌಡ, ರಾಮಕೃಷ್ಣಯ್ಯ, ಗೌಡಯ್ಯ ಇದ್ದರು.

ADVERTISEMENT

ತಿಪ್ಪಸಂದ್ರ ಗೇಟ್‌ ರಸ್ತೆ ಪಾಳ್ಯ ಬಳಿ ನಡೆದ ಪ್ರತಿಭಟನೆಯಲ್ಲಿ ಜಿ.ಪಂ.ಮಾಜಿ ಸದಸ್ಯ ಎಂ.ಕೆ.ಧನಂಜಯ, ತಾ.ಪಂ.ಮಾಜಿ ಅಧ್ಯಕ್ಷ ಕೆ.ಎಚ್‌.ಶಿವರಾಜ್‌ ತಂಡದವರು ತಟ್ಟೆ ಬಡಿದು ಕೇಂದ್ರ ಸರ್ಕಾರದ ಪೆಟ್ರೋಲ್‌ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.