ADVERTISEMENT

ಮಾಗಡಿ: ಚುನಾವಣೆ ಆಯೋಗ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 2:42 IST
Last Updated 3 ಆಗಸ್ಟ್ 2025, 2:42 IST
ಮಾಗಡಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರು 
ಮಾಗಡಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರು    

ಮಾಗಡಿ: ಚುನಾವಣೆ ಆಯೋಗ ಮತ್ತು ಕೇಂದ್ರ ಸರ್ಕಾರ ಸೇರಿ ಚುನಾವಣೆಯಲ್ಲಿ ಅಕ್ರಮ ಎಸೆಗಿರುವ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಣಿಗಾನಹಳ್ಳಿ ಸುರೇಶ್ ಹೇಳಿದರು.

ಪಟ್ಟಣದ ಜ್ಯೋತಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಆರೋಪದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಬಮೂಲ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಚುನಾವಣೆ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ಕೊಡಲು ಪ್ರತಿಭಟನೆ ನಡೆಯಲಿದೆ. ಪಾರದರ್ಶಕ ಚುನಾವಣೆ ಆದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ಗೆಲುವು ಸಿಗುತ್ತದೆ ಎಂದು ತಿಳಿಸಿದರು.

ADVERTISEMENT

ಗ್ಯಾರಂಟಿ ಅನುಷ್ಠಾನದ ತಾಲ್ಲೂಕು ಅಧ್ಯಕ್ಷ ಕಲ್ಕೆರೆ ಶಿವಣ್ಣ ಮಾತನಾಡಿದರು.

ಕಾಂಗ್ರೆಸ್ ಮುಖಂಡರಾದ ಮರಿಗೌಡ, ಜುಟ್ಟನಹಳ್ಳಿ ಜಯರಾಂ, ರಿಯಾಜ್, ರೂಪೇಶ್ ಬ್ಯಾಲಕೆರ, ಚಿಕ್ಕರಾಜು, ಪುರುಷೋತ್ತಮ್, ವನಜ, ಮಂಜುನಾಥ್, ತೇಜು, ಕೇಬಲ್, ಮಂಜುನಾಥ್, ಆನಂದ್, ಮೂರ್ತಿ, ಶಾಂತ, ಈರಣ್ಣ, ರವಿಕುಮಾರ್ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.