ಹಾರೋಹಳ್ಳಿ:ಕಾಂಗ್ರೆಸ್ ಪಕ್ಷವು ದಶಕಗಳಿಂದಲೂ ದಲಿತರಿಗೆ ಮಂಕುಬೂದಿಯನ್ನೆರುಚುತ್ತಾ ದಲಿತರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ನಿಗಮದ ಹಣವನ್ನು ನುಂಗಿ ನೀರು ಕುಡಿಯುವುದರ ಮೂಲಕ ದಲಿತ ವಿರೋಧಿ ನಡೆಯನ್ನು ಮತ್ತೊಮ್ಮೆ ಸಾಭೀತು ಮಾಡಿದೆ ಎಂದು ಬಿಜೆಪಿ ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ಹಾರೋಹಳ್ಳಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.
ಹಾರೋಹಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ವಾಲ್ಮೀಕಿ ನಿಗಮದ ಕೋಟ್ಯಂತರ ರೂಪಾಯಿಯನ್ನು ಹೊರರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ. ಇದೀಗ ಮುಡಾ ಹಗರಣ ಹೊರಬಿದ್ದಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹಗರಣಗಳ ವಿರುಧ್ಧ ಮೈಸೂರಿನವರೆಗೂ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಪಾದಯಾತ್ರೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿ ಭಗವಹಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಲಬೇಕು ಎಂದು ಅವರು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖರ್, ಖಜಾಂಚಿ ದೇವರಾಜು ಜಿಲ್ಲಾ ಉಪಾಧ್ಯಕ್ಷ ನಂದೀಶ್ ಸೇರಿದಂತೆ ಇನ್ನಿತರ ಕಾರ್ಯಕರ್ತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.