ADVERTISEMENT

ಮಾಗಡಿ: ₹7 ಕೋಟಿ ವೆಚ್ಚದಲ್ಲಿ ಸರ್ವಪಲ್ಲಿ ರಾಧಾಕೃಷ್ಣ ಸಮುದಾಯ ಭವನ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2024, 5:54 IST
Last Updated 2 ಆಗಸ್ಟ್ 2024, 5:54 IST
ಮಾಗಡಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಗಡಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಕಾರ್ಯಕ್ರಮವನ್ನು ಶಾಸಕ ಎಚ್.ಸಿ‌.ಬಾಲಕೃಷ್ಣ ಉದ್ಘಾಟಿಸಿದರು.
ಮಾಗಡಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಗಡಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಕಾರ್ಯಕ್ರಮವನ್ನು ಶಾಸಕ ಎಚ್.ಸಿ‌.ಬಾಲಕೃಷ್ಣ ಉದ್ಘಾಟಿಸಿದರು.   

ಮಾಗಡಿ: ಪಟ್ಟಣದಲ್ಲಿ ₹7 ಕೋಟಿ ವೆಚ್ಚದಲ್ಲಿ ಸರ್ವಪಲ್ಲಿ ರಾಧಾಕೃಷ್ಣ ಹೆಸರಿನಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಗಡಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಹಾಗೂ ಕಾರ್ಯಗಾರ ಉದ್ಘಾಟಿಸಿ ಮಾತನಾಡಿರು.

ಹಲವು ವರ್ಷಗಳಿಂದ ಇಲ್ಲಿ ‘ಗುರುಭವನ’ ನಿರ್ಮಾಣಕ್ಕೆ ಬೇಡಿಕೆ ಇತ್ತು. ಆದರೆ, ತಾಲ್ಲೂಕಿನ ಶಿಕ್ಷಣ ಇಲಾಖೆಯ ಕೆಲವು ನ್ಯೂನತೆಯಿಂದ ಗುರುಭವನ ಹೆಸರಿನ ಬದಲು ಸರ್ವಪಲ್ಲಿ ರಾಧಾಕೃಷ್ಣ ಹೆಸರಿಡಲು ತೀರ್ಮಾನಿಸಲಾಗಿದೆ’ ಎಂದರು.

ADVERTISEMENT

‘ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿ ಸಾವಿತ್ರಿಬಾಯಿ ಫುಲೆ ಶೋಷಿತರಿಗೆ ಅಕ್ಷರದ ಬೆಳಕು ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಮಹಿಳೆಯರ ಮೇಲಿನ ಧಾರ್ಮಿಕ ಮತ್ತು ಸಾಮಾಜಿಕ ಶೋಷಣೆಗಳನ್ನು ಶಿಕ್ಷಣದ ಮೂಲಕ ತೊಡೆದು ಹಾಕಲು ಶ್ರಮಿಸಿದವರು. ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಮಹಿಳಾ ಸಮುದಾಯಕ್ಕೆ ಶಿಕ್ಷಣದ ಹಕ್ಕನ್ನು ಕಲ್ಪಿಸಲು ಸ್ವತಹ ಮಹಿಳಾ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದ್ದರು. ಇಂತಹ ಧೀಮಂತ ಮಹಿಳೆ ಸಾವಿತ್ರಬಾಯಿ ಅವರನ್ನು ಸ್ಮರಿಸಿಬೇಕು’ ಅವರು ಹೇಳಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ‘ಸಮಸ್ಯೆಗಳ ಹಕ್ಕೊತ್ತಾಯಕ್ಕಾಗಿ ಆ.12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕನಿಷ್ಠ 1 ಲಕ್ಷ ಶಿಕ್ಷಕರ ಉಪಸ್ಥಿತಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು ಎಲ್ಲಾ ಶಿಕ್ಷಕರು ಭಾಗವಹಿಸಬೇಕು’  ಎಂದು ಮನವಿ ಮಾಡಿದರು. ಇದೇ ವೇಳೆ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ತಾಲ್ಲೂಕಿನ ಶಿಕ್ಷಕರ 49 ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, 68 ಅತ್ಯುತ್ತಮ ಮಹಿಳಾ ಶಿಕ್ಷಕರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

ರಸ್ತೆಗೆ ಸರ್ವಪಲ್ಲಿ ರಾಧಾಕೃಷ್ಣ ಹೆಸರಿಗೆ ಮನವಿ
ಮಾಗಡಿ ಪಟ್ಟಣದ ಹೊಸಪೇಟೆ ವೃತ್ತದಿಂದ ಎನ್.ಇ.ಎಸ್ ವೃತ್ತದ ವರೆಗೆ ಸರ್ವಪಲ್ಲಿ ರಾಧಾಕೃಷ್ಣ ಹೆಸರನ್ನು ನಾಮಕರಣ ಮಾಡಬೇಕೆಂದ ಶಿಕ್ಷಕರ ಸಂಘದಿಂದ ಶಾಸಕರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಸೇರಿಸಿ ಶಿಕ್ಷಕರ ಸಂಘದ ರಾಜ್ಯ, ಜಿಲ್ಲಾ, ತಾಲ್ಲೂಕು ಪದಾಧಿಕಾರಿಗಳು, ಸದಸ್ಯರು ಹಾಗೂ ಶಿಕ್ಷಕ, ಶಿಕ್ಷಕಿಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.