ADVERTISEMENT

ಕೊರೊನಾ: ತಪಾಸಣೆಗೆ ನಿರ್ಲಕ್ಷ್ಯ ಬೇಡ- ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಪ್ರಸಾದ್

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2021, 5:54 IST
Last Updated 30 ಏಪ್ರಿಲ್ 2021, 5:54 IST

ಮಾಗಡಿ: ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿ ಲಸಿಕೆ ಪಡೆಯುವುದು ಕಡ್ಡಾಯ ಎಂದು ತಹಶೀಲ್ದಾರ್ ಬಿ.ಜಿ. ಶ್ರೀನಿವಾಸಪ್ರಸಾದ್ ತಿಳಿಸಿದರು.

ಕೋವಿಡ್ ಸೋಂಕು ಹರಡದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಹೊರಗಿನಿಂದ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗೆ ತೆರಳಿ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕು. ಕೆಮ್ಮು, ನೆಗಡಿ, ಜ್ವರ, ಕಫದ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಬೇಕು. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟರೈಸ್ ಬಳಕೆ ಕಡ್ಡಾಯ ಎಂದರು.

ADVERTISEMENT

ಲಾಕ್‌ಡೌನ್ ಜಾರಿಯಲ್ಲಿದೆ. ಅಂಗಡಿಮುಗ್ಗಟ್ಟುಗಳನ್ನು ಮುಚ್ಚಿರಬೇಕು. ನಿಷೇಧಾಜ್ಞೆ ಜಾರಿಯಲ್ಲಿದೆ ಎಂಬುದನ್ನು ಮರೆತು ಮನೆಯಿಂದ ಹೊರಗೆ ಬಂದು ಅಲೆಯುವುದು ಕಂಡುಬಂದಲ್ಲಿ ಕಾನೂನು ಕಠಿಣ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಾದ್ಯಂತ ಕೋವಿಡ್ ಪರೀಕ್ಷೆ ಮಾಡಿಸಿ, ಕೋವಿಡ್ ಲಸಿಕೆ ಪಡೆಯುವಂತೆ ಟಾಂ ಟಾಂ ಹೊಡಿಸಲಾಗುವುದು. ಸಾರ್ವಜನಿಕರ ಸಹಕಾರದಿಂದ ಮಾತ್ರ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಬಹುದು ಎಂದು ಹೇಳಿದರು.

ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಟಿ. ಪ್ರದೀಪ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಸತೀಶ್, ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಾಜೇಶ್, ಸರ್ಕಲ್ ಇನ್‌ಸ್ಪೆಕ್ಟರ್ ಕುಮಾರ್, ಪಿಎಸ್ಐ ಶ್ರೀಕಾಂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.