ADVERTISEMENT

ಕನಕಪುರ: ಗರ್ಭಿಣಿಗೆ ಕೋವಿಡ್‌ –19 ದೃಢ, ಗ್ರಾಮ ಸೀಲ್‌ಡೌನ್

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 16:33 IST
Last Updated 24 ಜೂನ್ 2020, 16:33 IST
ಕನಕಪುರ ದ್ಯಾಪೇಗೌಡನದೊಡ್ಡಿ ಗ್ರಾಮದಲ್ಲಿ ಇ.ಒ ಶಿವರಾಮ್‌ ಸೀಲ್‌ಡೌನ್‌ ಮಾಡಲು ಪರಿಶೀಲನೆ ನಡೆಸಿದರು
ಕನಕಪುರ ದ್ಯಾಪೇಗೌಡನದೊಡ್ಡಿ ಗ್ರಾಮದಲ್ಲಿ ಇ.ಒ ಶಿವರಾಮ್‌ ಸೀಲ್‌ಡೌನ್‌ ಮಾಡಲು ಪರಿಶೀಲನೆ ನಡೆಸಿದರು   

ಕನಕಪುರ: ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ಯಾಪೇಗೌಡನದೊಡ್ಡಿಯಲ್ಲಿ ಗರ್ಭಿಣಿಯೊಬ್ಬರಿಗೆ ಕೋವಿಡ್‌ –19 ದೃಢಪಟ್ಟಿದ್ದು ಗ್ರಾಮವನ್ನು ಸೀಲ್‌ಡೌನ್‌‌ ಮಾಡಲಾಗಿದೆ.

ನವೋದಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಕೊರೊನಾ ಪಾಸಿಟಿವ್‌ ಬಂದಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಒ ಟಿ.ಎಸ್‌.ಶಿವರಾಮ್‌ ಗ್ರಾಮಕ್ಕೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಂಡರು.

ಮಕ್ಕಳು ಮತ್ತು ವಯೋವೃದ್ಧರಿಗೆ ಪ್ರತ್ಯೇಕ ಕಾಳಜಿ ವಹಿಸುವಂತೆ ತಿಳಿಸಿದರು. ಈ ವ್ಯಾಪ್ತಿಯ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಿಕೊಳ್ಳುವಂತೆ ಪಿಡಿಒ ಅವರಿಗೆ ಸೂಚನೆ ನೀಡಿದರು.

ADVERTISEMENT

ಸೋಂಕಿತರೊಂದಿಗೆ ನೇರ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್‌ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಹೇಶ್‌ (ಐನೋರ್‌) ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಕೀರಪ್ಪ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.