ADVERTISEMENT

ರಾಮನಗರ: ಕೊರೊನಾ ಸೈನಿಕರ ಸೇವೆಗೆ ಶ್ಲಾಘನೆ

225 ಆಶಾ ಕಾರ್ಯಕರ್ತೆಯರಿಗೆ ಬಮೂಲ್‌ನಿಂದ ₹3 ಸಾವಿರ ಸಹಾಯಧನ ವಿತರಣೆ

​ಪ್ರಜಾವಾಣಿ ವಾರ್ತೆ
Published 9 ಮೇ 2020, 9:37 IST
Last Updated 9 ಮೇ 2020, 9:37 IST
ಆದಿಚುಂಚನಗಿರಿ ಶಾಖಾ ಮಠದ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ. ಸೋಮಶೇಖರ್‍ ಆಶಾ ಕಾರ್ಯಕರ್ತೆಯರಿಗೆ ಸಹಾಯಧನ ವಿತರಿಸಿದರು
ಆದಿಚುಂಚನಗಿರಿ ಶಾಖಾ ಮಠದ ಸಭಾಂಗಣದಲ್ಲಿ ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಚಿವ ಎಸ್.ಟಿ. ಸೋಮಶೇಖರ್‍ ಆಶಾ ಕಾರ್ಯಕರ್ತೆಯರಿಗೆ ಸಹಾಯಧನ ವಿತರಿಸಿದರು   

ರಾಮನಗರ: ಕೊರೊನಾ ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‍ ಹೇಳಿದರು.

ಅರ್ಚಕರಹಳ್ಳಿಯಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶುಕ್ರವಾರ ಸಂಜೆ ಬೆಂಗಳೂರು ಹಾಲು ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಕೊರೊನಾ ವೈರಾಣು ನಿಯಂತ್ರಣ ಸಂಬಂಧ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆ ಹಾಗೂ ನರ್ಸ್‌ಗಳಿಗೆ ಸಹಾಯಧನದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಆಶಾ ಕಾರ್ಯಕರ್ತೆಯರು ಮತ್ತು ನರ್ಸ್‌ಗಳ ಕೆಲಸ ಗೌರವಿಸುವ ಸಲುವಾಗಿ ₹3 ಸಾವಿರ ಸಹಾಯಧನ ನೀಡುತ್ತಿ
ದ್ದೇವೆ. ಇವರ ಜತೆಯಲ್ಲಿ ಸೇವೆ ಸಲ್ಲಿಸುತ್ತಿರುವ 79 ನರ್ಸ್‌ಗಳಿಗೂ ಸಹಾಯಧನ ನೀಡಲಾಗುವುದು ಎಂದರು.

ADVERTISEMENT

ರಾಜ್ಯದಲ್ಲಿ ಪ್ರತಿದಿನ 10ಸಾವಿರಕ್ಕೂ ಹೆಚ್ಚು ಜನರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ರೋಗಿ
ಗಳನ್ನು ಪತ್ತೆ ಮಾಡುವ ಜತೆಗೆ ಅವರ ಆರೈಕೆಗೂ ಆದ್ಯತೆ ನೀಡಲಾಗಿದೆ. ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಅಂತರ ಕಾಯ್ದುಕೊಳ್ಳಲು ಜನರಲ್ಲಿ ಮನವಿ ಮಾಡಲಾಗಿದ್ದು, ಈ ಬಗ್ಗೆ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿ ಜಿಲ್ಲೆಗೂ ಭೇಟಿ ನೀಡಿ ಕೋವಿಡ್-19ರ ನಿಯಂತ್ರಣದಲ್ಲಿ ಶ್ರಮಿಸಿದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತೆಯರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಹೇಳಿದರು.

ಬಮುಲ್ ನಿರ್ದೇಶಕ ಪಿ.ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿ ಸಹಕಾರ ಭವನ ನಿರ್ಮಾಣಕ್ಕೆ ನೆರವು ನೀಡುವಂತೆ ಕೋರಿದರು. ಬಮುಲ್‌ ಅಧ್ಯಕ್ಷ ನರಸಿಂಹ
ಮೂರ್ತಿ, ಆದಿಚುಂಚನಗಿರಿ ಶಾಖಾ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಮಾತನಾಡಿದರು.

ಬಮುಲ್‌ ನಿರ್ದೇಶಕರಾದ ಅನಂತ್‌ಕುಮಾರ್, ಹರೀಶ್, ಕೇಶವಮೂರ್ತಿ, ಭಾಸ್ಕರ್, ಬಚ್ಚೇಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರುದ್ರೇಶ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುರಳೀಧರ್, ಬಿಡದಿ ಸ್ಮಾರ್ಟ್‌‌ಸಿಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವರದರಾಜುಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.