ADVERTISEMENT

ಭ್ರಷ್ಟಾಚಾರ ನಿರ್ಮೂಲನೆಗೆ ಪಣತೊಡಲು ಸಲಹೆ: ಹನುಮಂತ್‌ ಅನಂತ್‌ರಾವ್‌ ಸಾತ್ವಿಕ್

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 3:17 IST
Last Updated 1 ನವೆಂಬರ್ 2020, 3:17 IST
ಮಾಗಡಿಯಲ್ಲಿ ನಡೆದ ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹನುಮಂತ್‌ ಅನಂತ್‌ರಾವ್‌ ಸಾತ್ವಿಕ್‌ ಮಾತನಾಡಿದರು. ನ್ಯಾಯಾಧೀಶರಾದ ಲತಾ ಜೆ. ಇದ್ದರು
ಮಾಗಡಿಯಲ್ಲಿ ನಡೆದ ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹನುಮಂತ್‌ ಅನಂತ್‌ರಾವ್‌ ಸಾತ್ವಿಕ್‌ ಮಾತನಾಡಿದರು. ನ್ಯಾಯಾಧೀಶರಾದ ಲತಾ ಜೆ. ಇದ್ದರು   

ಮಾಗಡಿ: ‘ದೇಶದಲ್ಲಿ ಭ್ರಷ್ಟಾಚಾರದ ನಿರ್ಮೂಲನೆಗೆ ಜನಸಾಮಾನ್ಯರು ಪಣತೊಡಬೇಕು’ ಎಂದು ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶ ಹನುಮಂತ್‌ ಅನಂತ್‌ರಾವ್‌ ಸಾತ್ವಿಕ್ ಸಲಹೆ ನೀಡಿದರು.

ಪಟ್ಟಣದಲ್ಲಿ ಕೇಂದ್ರ ವಿಚಕ್ಷಣ ಆಯೋಗ, ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ನಡೆದ ಭ್ರಷ್ಟಾಚಾರ ಜಾಗೃತಿ ಅರಿವು ಸಪ್ತಾಹ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಸಂಪನ್ಮೂಲ ಮತ್ತು ಮಾನವ ಸಂಪತ್ತು ಸಾಕಷ್ಟಿದೆ. ಆದರೆ, ದೇಶದ ರಾಜಕೀಯ ಸೇರಿದಂತೆ ಎಲ್ಲಾ ರಂಗಗಳಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರತಿಯೊಬ್ಬರು ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು. ಲಂಚ ಕೊಡುವುದು, ತೆಗೆದುಕೊಳ್ಳುವುದು ಕಾನೂನು‌ಬಾಹಿರ ಎಂಬುದನ್ನು ಮನವರಿಕೆ ಮಾಡಿಕೊಳ್ಳಬೇಕು. ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರದ ನಿರ್ಮೂಲನೆಗೆ ಎಲ್ಲರೂ ಮುಂದಾಗಬೇಕಿದೆ. ಪ್ರಾಮಾಣಿಕತೆಯಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಧಾನ ಸಿವಿಲ್‌ ನ್ಯಾಯಾಧೀಶರಾದ ಲತಾ ಜೆ., ತಾಲ್ಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿ
ಕಾರಿ ಟಿ. ಪ್ರದೀಪ್‌ ಮಾತನಾಡಿದರು. ನ್ಯಾಯಾಲಯದ ಸಿಬ್ಬಂದಿ
ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.