ಕನಕಪುರ: ನಗರದಲ್ಲಿ ನಿರ್ಮಾಣವಾಗಿರುವ ನೂತನ ನ್ಯಾಯಾಲಯ ಸಂಕೀರ್ಣದ ಉದ್ಘಾಟನೆ ಸಮಾರಂಭವು ಆಗಸ್ಟ್ 14 ರಂದು ಸಂಜೆ 5ಕ್ಕೆ ನೆರವೇರಲಿದೆ.
ಜಿಲ್ಲಾ ನ್ಯಾಯಾಂಗ ಬೆಂಗಳೂರು ದಕ್ಷಿಣ ಜಿಲ್ಲೆ, ಲೋಕೋಪಯೋಗಿ ಇಲಾಖೆ ಬೆಂಗಳೂರು ದಕ್ಷಿಣ ಜಿಲ್ಲೆ ಮತ್ತು ವಕೀಲರ ಸಂಘ ಕನಕಪುರ ಇವರ ಸಂಯುಕ್ತಾಶ್ರಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಡಾ.ಸಿ.ಎನ್.ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ವಕೀಲರ ಸಂಘದ ಅಧ್ಯಕ್ಷ ಎ.ಸಿ.ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.