ADVERTISEMENT

ರಾಮನಗರ: ತ್ರಿಶತಕ ದಾಟಿದ ಸೋಂಕಿತರ ಸಂಖ್ಯೆ

ಮಾಗಡಿಯಲ್ಲಿ ಸಾವಿನ ಪ್ರಮಾಣ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 14:14 IST
Last Updated 8 ಜುಲೈ 2020, 14:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಜಿಲ್ಲೆಯಲ್ಲಿ ಬುಧವಾರ 34 ಮಂದಿಯಲ್ಲಿ ಕೋವಿಡ್‌-19 ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ. ಮಾಗಡಿ ತಾಲ್ಲೂಕಿನಲ್ಲಿ ಇಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಮಾಗಡಿ ತಾಲ್ಲೂಕಿನ‌ 40 ವರ್ಷದ ಪುರುಷ ಹಾಗೂ 70 ವರ್ಷದ ಮಹಿಳೆ ಕೋವಿಡ್‌ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಅಸುನೀಗಿದರು. ಇದರಿಂದಾಗಿ ಮೃತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಮಾಗಡಿ ತಾಲ್ಲೂಕು ಒಂದರಲ್ಲಿಯೇ ಆರು ಮಂದಿ ಈ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಮಾಗಡಿ ತಾಲ್ಲೂಕಿನಲ್ಲಿ ಈ ದಿನ ಹೊಸತಾಗಿ 22 ಪ್ರಕರಣಗಳು ವರದಿಯಾಗಿವೆ. ರಾಮನಗರದಲ್ಲಿ 2, ಕನಕಪುರ ಹಾಗೂ ಚನ್ನಪಟ್ಟಣ ತಾಲ್ಲೂಕಿನಲ್ಲಿ ತಲಾ ಐವರಲ್ಲಿ ಸೋಂಕು ದೃಢವಾಗಿದೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

27 ಜನರು ಗುಣಮುಖ: ಕೋವಿಡ್ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಿದ್ದು, ಬುಧವಾರ 27 ಮಂದಿ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 145 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ದಿನ 330 ಮಂದಿಯ ಗಂಟಲ ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದನ್ನೂ ಒಳಗೊಂಡು ಇನ್ನೂ 1604 ಜನರ ವರದಿಗಳ ಫಲಿತಾಂಶ ಬರಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.