ADVERTISEMENT

ಕೋವಿಡ್‌-19: ರಾಮನಗರದಲ್ಲಿ ಮತ್ತೆ ಎರಡು ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 15:53 IST
Last Updated 4 ಜೂನ್ 2020, 15:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ಜಿಲ್ಲೆಯಲ್ಲಿ ಗುರುವಾರ ಇಬ್ಬರಲ್ಲಿ ಕೋವಿಡ್-19 ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಸೋಮವಾರ ಸೋಂಕು ಪತ್ತೆಯಾಗಿದ್ದ ರೋಗಿ ಸಂಖ್ಯೆ 3313 ವ್ಯಕ್ತಿಯ 23 ವರ್ಷದ ಪುತ್ರನಿಗೆ ಸೋಂಕು ತಗುಲಿದೆ. ಇವರು ರಾಮನಗರದವರಾಗಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ 28 ವರ್ಷದ ವ್ಯಕ್ತಿಯಲ್ಲೂ ಗುರುವಾರ ಸೋಂಕು ಪತ್ತೆಯಾಗಿದೆ.

ಆದರೆ ರಾಜ್ಯ ಆರೋಗ್ಯ ಇಲಾಖೆ ಗುರುವಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ಇಬ್ಬರು ಸೋಂಕಿತರ ವಿವರ ಇಲ್ಲ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ನಲ್ಲಿ ಇಬ್ಬರ ಸಂಖ್ಯೆ ನಮೂದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.