ADVERTISEMENT

ಕೋವಿಡ್‌-19 ಹಿನ್ನೆಲೆ: ರಾಮನಗರ ಎಸ್ಪಿ ಕಚೇರಿ ಸೀಲ್ ಡೌನ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 14:45 IST
Last Updated 6 ಜುಲೈ 2020, 14:45 IST
ರಾಮನಗರ ಎಸ್ಪಿ ಕಚೇರಿ
ರಾಮನಗರ ಎಸ್ಪಿ ಕಚೇರಿ   

ರಾಮನಗರ: ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ‌ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಒಬ್ಬರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ‌‌.

ಸ್ಯಾನಿಟೈಸ್ ಮಾಡುವ ಸಲುವಾಗಿ ಕಚೇರಿಯನ್ನು ಮುಚ್ಚಲಾಗಿದೆ. ಸಾರ್ವಜನಿಕರು ಇತ್ತ ಬರಬೇಡಿ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಆರು ಪೊಲೀಸರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಒಬ್ಬರು ಗುಣಮುಖರಾಗಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಕೋಡಿಹಳ್ಳಿ ಠಾಣೆ ಸಬ್ ಇನ್ ಸ್ಪೆಕ್ಟರ್ ಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಸೋಮವಾರ ಠಾಣೆಯನ್ನು ಸೀಲ್ ಡೌನ್ ಮಾಡಿದ್ದು, ಅವರ ಸಂಪರ್ಕಕ್ಕೆ ಬಂದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.