ADVERTISEMENT

ಕೋವಿಡ್ –19: ವೃದ್ಧ ಸಾವು

ಕನಕಪುರ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 14:37 IST
Last Updated 12 ಜುಲೈ 2020, 14:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕನಕಪುರ: ಕೋವಿಡ್‌ –19ನಿಂದ ತಾಲ್ಲೂಕಿನ ಹಳೇ ಗಬ್ಬಾಡಿ ಗ್ರಾಮದಲ್ಲಿ 58 ವರ್ಷದ ವ್ಯಕ್ತಿಯೊಬ್ಬರು ಶನಿವಾರ ರಾತ್ರಿ ನಿಧನರಾದರು.

ಅವರಿಗೆ ಮೂವರು ಮಕ್ಕಳು ಮತ್ತು ಪತ್ನಿ ಇದ್ದಾರೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಗ ನಡೆಸಿದ ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ.

ಆರೋಗ್ಯ ಇಲಾಖೆ ನಿರ್ದೇಶನದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅವರ ಸಂಪರ್ಕದಲ್ಲಿದ್ದ ಪತ್ನಿ ಹಾಗೂ ಪುತ್ರನನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.