ADVERTISEMENT

ಡಿಕೆಶಿ ಆರೋಗ್ಯ ಸುಧಾರಣೆಗೆ ಗಣ್ಯರ ಹಾರೈಕೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 5:41 IST
Last Updated 26 ಆಗಸ್ಟ್ 2020, 5:41 IST
ಕೋವಿಡ್‌ ಸೋಂಕು ತಗುಲಿದ ಕುರಿತು ಡಿ.ಕೆ. ಶಿವಕುಮಾರ್‍ ಮಾಡಿದ ಟ್ವೀಟ್‌
ಕೋವಿಡ್‌ ಸೋಂಕು ತಗುಲಿದ ಕುರಿತು ಡಿ.ಕೆ. ಶಿವಕುಮಾರ್‍ ಮಾಡಿದ ಟ್ವೀಟ್‌   

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದ್ದು, ಅವರು ಶೀಘ್ರ ಗುಣಮುಖರಾಗುವಂತೆ ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಹಾರೈಸಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಕೆ.ಸಿ. ವೇಣುಗೋಪಾಲ್‌ ಸಹಿತ ಹಲವರು ಮಂಗಳವಾರ ದೂರವಾಣಿ ಕರೆ ಮಾಡಿ ಡಿಕೆಶಿ ಆರೋಗ್ಯ ವಿಚಾರಿಸಿದ್ಧಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ. ಮತ್ತೊಂದೆಡೆ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ವಿವಿಧ ಪೋಸ್ಟ್‌ಗಳ ಮೂಲಕ ಶಿವಕುಮಾರ್‌ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT