ADVERTISEMENT

ರಾಮನಗರ: ಹಸುವಿನ ಹುಟ್ಟುಹಬ್ಬ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 16:37 IST
Last Updated 26 ಫೆಬ್ರುವರಿ 2021, 16:37 IST
ಸಂಕಲಗೆರೆ ಗ್ರಾಮದಲ್ಲಿ ಶುಕ್ರವಾರ ಹಸುವಿನ ಜನ್ಮದಿನವನ್ನು ಆಚರಿಸಲಾಯಿತು
ಸಂಕಲಗೆರೆ ಗ್ರಾಮದಲ್ಲಿ ಶುಕ್ರವಾರ ಹಸುವಿನ ಜನ್ಮದಿನವನ್ನು ಆಚರಿಸಲಾಯಿತು   

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಸಂಕಲಗೆರೆ ಗ್ರಾಮದಲ್ಲಿ ಶುಕ್ರವಾರ ಸಂಜೆ ಹಸುವೊಂದರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಧ್ರುವರಾಜ್‌ ಎಂಬ ಯುವಕ ತಮ್ಮ ಮನೆಯ ಹಸುವಿಗೆ ಚಿನ್ಮಯಿ ಎಂದು ಹೆಸರಿಟ್ಟಿದ್ದಾರೆ. ಅದರ ಮೂರನೇ ಜನ್ಮದಿನವನ್ನು ಗೆಳೆಯರ ಜೊತೆಗೂಡಿ ಕೇಕ್‌ ಕತ್ತರಿಸುವ ಮೂಲಕ ಆಚರಿಸಿದರು. ಹಸುವಿನ ಜೊತೆಗೆ ಫೋಟೊಗೆ ಪೋಸ್‌ ಕೊಟ್ಟರು. ಇದೇ ಸಂದರ್ಭ ಗ್ರಾಮದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT