ADVERTISEMENT

ರಾಮನಗರ: ಕೋವಿಡ್ ನಡುವೆ ಸಿಪಿವೈ ಅದ್ಧೂರಿ ಜನ್ಮದಿನಾಚರಣೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2020, 10:36 IST
Last Updated 29 ಆಗಸ್ಟ್ 2020, 10:36 IST
ಸಿ.ಪಿ. ಯೋಗೇಶ್ವರ್ ಹುಟ್ಟುಹಬ್ಬ ಆಚರಣೆ
ಸಿ.ಪಿ. ಯೋಗೇಶ್ವರ್ ಹುಟ್ಟುಹಬ್ಬ ಆಚರಣೆ   

ರಾಮನಗರ: ಕೋವಿಡ್ ಭೀತಿ ನಡುವೆಯೂ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಚನ್ನಪಟ್ಟಣದಲ್ಲಿ ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಂಡರು.

ಚನ್ನಪಟ್ಟಣದ ಕಲ್ಯಾಣಮಂಟಪ ಒಂದರಲ್ಲಿ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅವರು 55 ಕೆ.ಜಿ. ತೂಕದ ಕೇಕ್ ಕತ್ತರಿಸಿದರು. ಆದರೆ ಹುಟ್ಟುಹಬ್ಬದ ಸಂಭ್ರಮದಲ್ಲಿ ಪರಸ್ಪರ ಅಂತರ ನಿಯಮ ಪಾಲನೆ ಮಾತ್ರ ಮರೆಯಾಗಿತ್ತು.

ಇದೇ ಸಂದರ್ಭ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ಸಹ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.