ADVERTISEMENT

ಅವಕಾಶ ಸಿಕ್ಕರೆ ಡಿಕೆಶಿ ಸಿಎಂ ಆಗಲಿ: ಯೋಗೇಶ್ವರ್

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:47 IST
Last Updated 2 ಜುಲೈ 2025, 15:47 IST
ಸಿ.ಪಿ. ಯೋಗೇಶ್ವರ್
ಸಿ.ಪಿ. ಯೋಗೇಶ್ವರ್   

ಚನ್ನಪಟ್ಟಣ: ‘ಅವಕಾಶ ಬಂದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂಬುದು ನನ್ನ ಅಭಿಪ್ರಾಯ. ಆದರೆ, ಅಂತಹ ಸಂದರ್ಭ ಬಂದಿಲ್ಲ ಎನಿಸುತ್ತದೆ. ನಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ ಎಂದು ಈಗಾಗಲೇ ಸಿಎಂ ಮತ್ತು ಡಿಸಿಎಂ ಪರಸ್ಪರ ಕೈ ಹಿಡಿದುಕೊಂಡು ಹೇಳಿದ್ದಾರೆ. ಹೀಗಿರುವಾಗ ನಾವು ಭಿನ್ನಾಭಿಪ್ರಾಯ ಸೃಷ್ಟಿಸಬಾರದು’ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಕುರಿತು ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಶಿವಕುಮಾರ್ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ. ಆದರೆ, ಯಾವಾಗ ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಬೇಕು. ಈ ವಿಷಯದಲ್ಲಿ ನಾವು ಗೊಂದಲದಲ್ಲಿ ಸಿಲುಕಬಾರದು’ ಎಂದರು.

‘ಅಭಿವೃದ್ಧಿ ವಿಚಾರದಲ್ಲಿ ಕ್ಷೇತ್ರಕ್ಕೆ ಅನುದಾನದ ಕೊರತೆ ಇಲ್ಲ. ನಾನು ಶಾಸಕನಾಗುವ ಮೊದಲೇ ಸಾಕಷ್ಟು ಅನುದಾನ ಬಂದಿದೆ. ನೀರಾವರಿ ಇಲಾಖೆಯಿಂದ ಈಗಾಗಲೇ ಸಾಕಷ್ಟು ಅನುದಾನ ಕೊಟ್ಟಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.