ADVERTISEMENT

ಸಿಲಿಂಡರ್ ಸ್ಫೋಟ: ಚಾವಣಿಯ ಸೀಟು ಹಾನಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 6:50 IST
Last Updated 2 ಜುಲೈ 2025, 6:50 IST
<div class="paragraphs"><p>ಸ್ಫೋಟ</p></div>

ಸ್ಫೋಟ

   

ಹಾರೋಹಳ್ಳಿ: ತಾಲ್ಲೂಕಿನ ಮಲ್ಲಿಗೆ ಮೆಟ್ಟಿಲು ಗ್ರಾಮದಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಮನೆಯ ಚಾವಣಿಯ ಸೀಟು ಹಾಗೂ ವಸ್ತುಗಳು ಹಾನಿಗೊಳಗಾಗಿವೆ.

ಮಂಜುನಾಥ್ ಎಂಬುವರ ಮನೆಯಲ್ಲಿ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಇದರಿಂದ ಚಾವಣಿಯ ಸೀಟು, ಟೈಲ್‌ ಹಾಗೂ ಮನೆ ವಸ್ತುಗಳು ಹಾನಿಯಾಗಿ ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ.

ADVERTISEMENT

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಘಟನೆ ನಡೆದಿದ್ದು, ಕುಟುಂಬ ಅಪಾಯದಿಂದ ಪಾರಾಗಿದೆ. ಮಾಹಿತಿ ತಿಳಿದು ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.