ADVERTISEMENT

ಸಿಲಿಂಡರ್ ಸ್ಫೋಟ: ಮನೆಗೆ ಹಾನಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 14:36 IST
Last Updated 18 ಏಪ್ರಿಲ್ 2020, 14:36 IST
ಸಿಲಿಂಡರ್‌ ಸ್ಫೋಟದಿಂದ ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದು
ಸಿಲಿಂಡರ್‌ ಸ್ಫೋಟದಿಂದ ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದು   

ರಾಮನಗರ: ತಾಲ್ಲೂಕಿನ ಬ್ಯಾಲಕುಳಿದೊಡ್ಡಿ ಗ್ರಾಮದ ಬಿ.ಎಚ್. ರಾಜಣ್ಣ ಎಂಬುವರ ಮನೆಯಲ್ಲಿ ಶನಿವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡಿದ್ದು ಮನೆಗೆ ಹಾನಿಯಾಗಿದೆ‌.

ಬೆಳಗ್ಗೆ ಹಾಲು ಕಾಯಿಸುವ ಸಮಯದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತು. ಮನೆಯಲ್ಲಿದ್ದ ನಾಲ್ವರು ಹೊರಗೆ ಓಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮನೆಯಲ್ಲಿನ ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ‌ ಒಂದು ಗಂಟೆ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸಿದರು. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT